ದಕ್ಷಿಣ ಕನ್ನಡ: ಯುವಕನೋರ್ವ ಏಕಕಾಲಕ್ಕೆ ಡೆಂಗ್ಯೂ ಮತ್ತು ಮಲೇರಿಯಾ ಜ್ವರ ಬಾಧಿಸಿ ಮೃತಪಟ್ಟ ಘಟನೆ ಕಡಬಾದಲ್ಲಿ ನಡೆದಿದೆ.
ಕಡಬ ತಾಲೂಕು ಕುಟುಪಾಡಿ ಗ್ರಾಮದ ವಿಮಲಗಿರಿ ಕಲ್ಲೋಲಿಕ್ಕಲ್ ನಿವಾಸಿ ಶಿಜು ಕಲ್ಲೋಲಿಕ್ಕಲ್(31) ಅಸುನೀಗಿದ ದುರ್ದೈವಿ. ಶಿಜು ಕಲ್ಲೋಳಿಕಲ್ ಜ್ವರ ಕಾಣಿಸಿಕೊಂಡ ಕಾರಣ ಕಡಬದ ಖಾಸಗಿ ಮೆಡಿಕಲ್ ಸೆಂಟರ್‌ಗೆ ಚಿಕಿತ್ಸೆಗಾಗಿ ಆಗಮಿಸಿದ್ದರು.
ಅಲ್ಲಿ ಪರೀಕ್ಷೆ ನಡೆಸಿದಾಗ ಡೆಂಗ್ಯೂ ಜ್ವರ ಪತ್ತೆಯಾಗಿತ್ತು. ನಂತರದಲ್ಲಿ ಮನೆಗೆ ಬಂದ ಬಳಿಕ ಜ್ವರ ಉಲ್ಬಣಗೊಂಡ ಹಿನ್ನೆಲೆಯಲ್ಲಿ ಮತ್ತೆ ಮಾರನೇ ದಿನ ಆಸ್ಪತ್ರೆಗೆ ದಾಖಲಿಸಲಾಗಿತ್ತು ಎನ್ನಲಾಗಿದೆ.
ಅಲ್ಲಿ ಯುವಕನನ್ನು ಪರೀಕ್ಷಿದ ವೈದ್ಯರು, ಆತನಿಗೆ ಹೆಚ್ಚುವರಿ ಚಿಕಿತ್ಸೆ ಪಡೆಯುವುದಕ್ಕಾಗಿ ಮಂಗಳೂರಿಗೆ ಕಳುಹಿಸಿಕೊಟ್ಟರು. ಆದರೆ ಮಂಗಳೂರಿನ ಆಸ್ಪತ್ರೆಗೆ ತಲುಪಿದ ವೇಳೆಗಾಗಲೇ ಯುವಕ ಮೃತಪಟ್ಟಿರುವುದಾಗಿ ತಿಳಿದು ಬಂದಿದೆ.