Pಬೆಂಗಳೂರು: ದೆವ್ವದ ಮುಖವಾಡ ಧರಿಸಿ ಡೆಡ್ಲಿ ವ್ಹೀಲಿಂಗ್ ಮಾಡುತ್ತಿದ್ದವರಿಗೆ ಸಂಕಷ್ಟ ಎದುರಾಗಿದೆ. ಮೂವರು ಯುವಕರನ್ನು ಪೊಲೀಸರು ಬಂಧಿಸಿ ಪೋಷಕರಿಗೆ ದಂಡ ವಿಧಿಸಿ, ಮೂವರಿಗೆ ಚಳಿ ಬಿಡಿಸಿದ್ದಾರೆ.
ಬೆಂಗಳೂರಿನ ಕಾಮಾಕ್ಷಿ ಪಾಳ್ಯದ ಪೊಲೀಸರು ಮೂವರನ್ನು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ. ಈ ಮೂವರು ರಸ್ತೆಗಳಲ್ಲಿ ದೆವ್ವಗಳ ಮುಖವಾಡ ಧರಿಸಿ ರಸ್ತೆಗಳಲ್ಲಿ ಡೆಡ್ಲಿ ವ್ಹೀಲಿಂಗ್ ಮಾಡುತ್ತಿದ್ದರು.
ನಂತರ ಪೊಲೀಸರು ಮೂವರನ್ನು ಬಂಧಿಸಿ ಬೈಕ್ ಸೀಜ್ ಮಾಡಿ ಪೋಷಕರಿಗೆ 25 ಸಾವಿರ ದಂಡ ವಿಧಿಸಿದ್ದಾರೆ. ಬೈಕ್ ವೀಲರ್ಸ್ ವಿರುದ್ಧ 14 ಪ್ರಕರಣ ದಾಖಲಿಸಿದ್ದಾರೆ.
ವೀಲ್ಹಿಂಗ್ ಮಾಡುವಾಗ ದೆವ್ವದ ಮುಖವಾಡ ಧರಿಸುತ್ತಿದ್ದ ಇವರು ʼಡೆವಿಲ್ಸ್ ಆನ್ ರೋಡ್ʼ ಎಂದು ತಮ್ಮನ್ನ ತಾವು ಕರೆದುಕೊಳ್ಳುತ್ತಿದ್ದರು.