Saturday, January 25, 2025

ಧರ್ಮಸ್ಥಳ: ಶಿವೈಕ್ಯಳಾದ‌ ಆನೆ ಲತಾ – ಶಿವರಾತ್ರಿ ದಿನವೇ ನಿಧನ!

ಧರ್ಮಸ್ಥಳ ಮಂಜುನಾಥ ಸ್ವಾಮಿಯ ಸೇವೆ ಸಲ್ಲಿಸುತ್ತಿದ್ದ ಆನೆ ಲತಾ ಹೃದಯಾಘಾತದಿಂದ ಶಿವೈಕ್ಯವಾಗಿದೆ. ಮಹಾಶಿವಾರಾತ್ರಿ ದಿನವೇ ಆನೆ ಮೃತಪಟ್ಟಿರುವುದು ಭಕ್ತರನ್ನು ಮತ್ತಷ್ಟು ಶೋಕಸಾಗರದಲ್ಲಿ ಮುಳುಗಿಸಿದೆ.

ಧರ್ಮಸ್ಥಳ ಶ್ರೀ ಮಂಜುನಾಥನಿಗೆ ಸೇವೆ ಸಲ್ಲಿಸುತ್ತಾ ಭಕ್ತರು ಹಾಗೂ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ ವಿರೇಂದ್ರ ಹೆಗ್ಗಡೆಯ ಪ್ರೀತಿಗೆ ಪಾತ್ರವಾಗಿದ್ದ ಆನೆ ಲತಾ ಹೃದಯಾಘಾತದಿಂದ ಮೃತಪಟ್ಟಿದೆ.

ಮಹಾ ಶಿವರಾತ್ರಿ ದಿನವೇ ಆನೆ ಲತಾಗೆ ಹೃದಯಾಘಾತವಾಗಿ ಮೃತಪಟ್ಟಿದೆ. 60 ವಯಸ್ಸಿನ ಲತಾ ಅಂತ್ಯಸಂಸ್ಕಾರವನ್ನು ಇಂದು ಸಂಜೆ ಧರ್ಮಸ್ಥಳದಲ್ಲಿ ನೆರವೇರಿಸಲಾಗಿದೆ.

ಕಳೆದ 50 ವರ್ಷಗಳಿಂದ ಆನೆ ಲತಾ ಧರ್ಮಸ್ಥಳದಲ್ಲಿ ಶ್ರೀ ಮಂಜುನಾಥನ ಸೇವೆ ಸಲ್ಲಿಸುತ್ತಾ ಬಂದಿದೆ. ಮಂಜುನಾಥನ ವಿಶೇಷ ಪೂಜೆ, ಉತ್ಸವ, ಲಕ್ಷದಿಪೋತ್ಸೋವ, ಶಿವರಾತ್ರಿ ಸೇರಿದಂತೆ ಎಲ್ಲಾ ಧಾರ್ಮಿಕ ಕಾರ್ಯಕ್ರಮಗಳಲ್ಲಿ ಆನೆ ಲತಾ ತನ್ನ ಜವಾಬ್ದಾರಿಯನ್ನು ಅಚ್ಚುಕಟ್ಟಾಗಿ ನಿರ್ವಹಿಸಿದ ಹೆಗ್ಗಳಿಕೆಗೆ ಪಾತ್ರವಾಗಿದೆ.

Related Articles

Latest Articles