ನದಿಯಲ್ಲಿ ಸ್ನಾನ ಮಾಡುತ್ತಿದ್ದ ಮೂವರು ಯುವಕರು ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ಬೆಳ್ತಂಗಡಿ ತಾಲೂಕಿನ ಮೂಡುಕೋಡಿ ಗ್ರಾಮದ ಬರ್ಕಜೆ ಡ್ಯಾಂ ನಲ್ಲಿ ನಡೆದಿದೆ.
ಎಡಪದವಿನ ಲಾರೆನ್ಸ್(20), ಮಡಂತ್ಯಾರಿನ ಸೂರಜ್ (19), ವಗ್ಗದ ಜೈಸನ್(19) ಮುಳುಗಿ ಮೃತಪಟ್ಟ ಯುವಕರು ಎಂದು ತಿಳಿದು ಬಂದಿದೆ.
ಮೂಡುಕೋಡಿ ವಾಲ್ಟರ್ ಎಂಬವರ ಮನೆಗೆ ಬಂದಿದ್ದ ಮೂವರು ಯುವಕರು ಊಟ ಮುಗಿಸಿ ನದಿಯಲ್ಲಿ ಸ್ನಾನ ಮಾಡಲು ಹೋಗಿದ್ದರು ಎನ್ನಲಾಗಿದೆ. ನದಿಯಲ್ಲಿನ ಗುಂಡಿಯ ಬಗ್ಗೆ ಅರಿವಿಲ್ಲದೆ ಬಿದ್ದು ಮೂವರು ವಿದ್ಯಾರ್ಥಿಗಳು ಜೀವ ಕಳೆದುಕೊಳ್ಳುವಂತಾಗಿದೆ ಎಂದು ಹೇಳಲಾಗುತ್ತಿದೆ.