ಇಂದು ಮುಂಜಾನೆ ಬಂಗಾಳ ಕೊಲ್ಲಿಯಲ್ಲಿ 4.4 ತೀವ್ರತೆಯ ಭೂಕಂಪ ಸಂಭವಿಸಿದೆ ಎಂದು ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರ (ಎನ್‌ಸಿಎಸ್) ವರದಿ ಮಾಡಿದೆ.
ಸೋಮವಾರ (ಸೆ.11) ಮುಂಜಾನೆ 1:29 ರ ಸುಮಾರಿಗೆ ಬಂಗಾಳ ಕೊಲ್ಲಿಯಲ್ಲಿ ಭೂಮಿಯ ಮೇಲ್ಮೈಯಿಂದ 70 ಕಿಲೋಮೀಟರ್ ಆಳದಲ್ಲಿ 4.4 ತೀವ್ರತೆಯ ಭೂಕಂಪ ಸಂಭವಿಸಿದೆ ಎಂದು NCS ಮಾಹಿತಿ ನೀಡಿದೆ.
ಭೂಕಂಪದಿಂದಾದ ಹಾನಿಯ ಬಗ್ಗೆ ಇನ್ನೂ ಯಾವುದೇ ವರದಿಯಾಗಿಲ್ಲ. ಹೆಚ್ಚಿನ ಮಾಹಿತಿಗಾಗಿ ನಿರೀಕ್ಷಿಸಲಾಗುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.