ವಾಣಿಜ್ಯ ಚಟುವಟಿಕೆ / ಉದ್ಯಮಗಳನ್ನು ಪ್ರಾರಂಭಿಸಲು ಇಚ್ಚಿಸುವ ಪರಿಶಿಷ್ಟಜಾತಿ ಮತ್ತು ಪರಿಶಿಷ್ಟ ಪಂಗಡದವರಿಗೆ ಕೌಶಲ್ಯಾಭಿವೃದ್ಧಿ ಇಲಾಖೆಯ ಸಿಡಾಕ್ ಸಂಸ್ಥೆಯ ಮೂಲಕ ಉದ್ಯಮಶೀಲತಾ ತರಬೇತಿಗೆ ಅರ್ಜಿ ಆಹ್ವಾನ ಮಾಡಲಾಗಿದೆ.
ನಿಗದಿಪಡಿಸಿರುವ ಅರ್ಹತೆಗಳು
- ವಯೋಮಿತಿ-ಕನಿಷ್ಠ 21 ವರ್ಷ ಹಾಗೂ ಗರಿಷ್ಠ 50 ವರ್ಷ
- ಶೈಕ್ಷಣಿಕ ಅರ್ಹತೆ-ಪಿ.ಯು.ಸಿ ಮತ್ತು ಮೇಲ್ಪಟ್ಟು
ತರಬೇತಿಯ ಬಗ್ಗೆ ವಿವರ
- ಉದ್ದಿಮೆ, ವಾಣಿಜ್ಯ ಚಟುವಟಿಕೆಗಳನ್ನು ಪ್ರಾರಂಭಿಸಲು ಉತ್ತೇಜನ ಮತ್ತು ಮಾರ್ಗದರ್ಶನ ನೀಡಲು ಉದ್ಯಮಶೀಲತಾ ತರಬೇತಿಯನ್ನು ಆಯೋಜಿಸಲಾಗಿದೆ.
- ಸರ್ಕಾರದ ವಿವಿಧ ಇಲಾಖೆಗಳಿಂದ ಪ.ಜಾತಿ/ಪ.ಪಂಗಡದವರಿಗೆ ಉದ್ದಿಮೆಗಳನ್ನು ಸ್ಥಾಪಿಸಲು ನೀಡಲಾಗುವ ಸಾಲ ಸೌಲಭ್ಯಗಳ ಬಗ್ಗೆ ಮಾಹಿತಿ ನೀಡಲಾಗುವುದು.
- ರಾಷ್ಟ್ರೀಕೃತ ಬ್ಯಾಂಕ್ ಹಾಗೂ ಇತರೆ ಬ್ಯಾಂಕ್‌ಗಳು ಸೇರಿದಂತೆ ವಿವಿಧ ಹಣಕಾಸು ಸಂಸ್ಥೆಗಳಿಂದ ನೀಡಲಾಗುವ ಸಾಲ ಸೌಲಭ್ಯದ ಮಾಹಿತಿಯನ್ನು ನೀಡಲಾಗುವುದು.
- ಆಯಾ ಜಿಲ್ಲಾ ಕೇಂದ್ರಗಳಲ್ಲಿ ಹತ್ತು ದಿನಗಳ ಉಚಿತ ತರಬೇತಿ ಕಾರ್ಯಕ್ರಮವನ್ನು ಆಯೋಜಿಸಲಾಗುವುದು.
- ತರಬೇತಿಗೆ ಹಾಜರಾಗಲು ಪ್ರತಿ ಅಭ್ಯರ್ಥಿಗೆ ಪ್ರಯಾಣ ಭತ್ಯೆಯಾಗಿ ಹತ್ತು ದಿನಗಳಿಗೆ ರೂ. 1,000/-ಗಳ ಕ್ರೋಡೀಕೃತ ಮೊತ್ತವನ್ನು ನೀಡಲಾಗುವುದು.
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 30.11.2023
“ನಮ್ಮ ವೈವಿಧ್ಯಮಯ ಸಂಸ್ಕೃತಿ ಮತ್ತು ಪರಂಪರೆಯನ್ನು ಗೌರವಿಸುವುದು ಮತ್ತು ಕಾಪಾಡುವುದು ಪ್ರತಿಯೊಬ್ಬ ಭಾರತೀಯನ ಸಂವಿಧಾನಬದ್ಧ ಮೂಲಭೂತ ಕರ್ತವ್ಯ ಅರ್ಜಿ ಸಲ್ಲಿಸಲು ಈ ಕ್ಯೂಆರ್ ಕೋಡ್ ಸ್ಕ್ಯಾನ್ ಮಾಡಿ ಅಥವಾ www.scsptsp.Karnataka.gov.in r ಭೇಟಿ ನೀಡಿ. ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ ಕಲ್ಯಾಣ ಮಿತ್ರ 24 x 7 ಸಹಾಯವಾಣಿ 9482300400ಗೆ ಸಂಪರ್ಕಿಸಬಹುದಾಗಿದೆ.