Monday, December 9, 2024

ಸಾಲು ಮರದ ತಿಮ್ಮಕ್ಕ ಇನ್ನಿಲ್ಲ ಎಂಬುವುದು ಸುಳ್ಳು ಸುದ್ದಿ – ಸ್ಪಷ್ಟನೆ ನೀಡಿದ ಪುತ್ರ

ಕರ್ನಾಟಕ ಸರ್ಕಾರದ ಪರಿಸರ ರಾಯಭಾರಿಯಾಗಿರುವ ವೃಕ್ಷ ಮಾತೆ, ಸಾಲು ಮರದ ತಿಮ್ಮಕ್ಕ ನಿಧನರಾಗಿದ್ದಾರೆ ಎಂಬ ಸುಳ್ಳು ಸುದ್ದಿ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ಈ ಬಗ್ಗೆ ತಿಮ್ಮಕ್ಕ ಅವರ ದತ್ತು ಪುತ್ರ ಉಮೇಶ್ ಸ್ಪಷ್ಟನೆ ನೀಡಿದ್ದಾರೆ. ವಿಡಿಯೊ ಹಂಚಿಕೊAಡಿರುವ ಅವರು ಊಹಾಪೋಹಗಳಿಗೆ ತೆರೆ ಎಳೆದಿದ್ದಾರೆ.

ಮೂರು ತಿಂಗಳ ಹಿಂದೆ ಅವರು ಬೆಂಗಳೂರಿನ ತಮ್ಮ ಮನೆಯಲ್ಲಿ ಬಿದ್ದು ಗಾಯಗೊಂಡು ಚಿಕಿತ್ಸೆ ಪಡೆದಿದ್ದರು. ನಂತರ ಬೇಲೂರು ಸಮೀಪದ ಬಳ್ಳೂರಿನಲ್ಲಿರುವ ಉಮೇಶ್ ಅವರ ಮನೆಗೆ ತೆರಳಿದ್ದರು.

ಸೆಪ್ಟೆಂಬರ್ 26ರಂದು ಅವರ ಉಸಿರಾಟದಲ್ಲಿ ಏರುಪೇರಾಗಿದ್ದರಿಂದ ಬೇಲೂರಿನ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದರು. ಸೋಮವಾರ ರಾತ್ರಿಯಿಂದ ಉಸಿರಾಟದಲ್ಲಿ ತೀವ್ರ ಏರು ಪೇರಾಗಿದ್ದರಿಂದ ಬೆಂಗಳೂರಿನ ಅಪೋಲೊ ಆಸ್ಪತ್ರೆಗೆ ಮಂಗಳವಾರ ದಾಖಲಿಸಲಾಗಿತ್ತು. ಚಿಕಿತ್ಸೆ ಮುಂದುವರಿದಿದೆ ಎನ್ನಲಾಗಿದೆ.

Related Articles

Latest Articles