ಅಸ್ಸಾಂ ನಲ್ಲಿ ಕಾಂಗ್ರೆಸ್ ಜೋಡೋ ನ್ಯಾಯ ಯಾತ್ರೆಗೆ ತಡೆ ನೀಡಿದ್ದನ್ನು ವಿರೋಧಿಸಿ ಬೆಂಗಳೂರಿನ ಕಾಂಗ್ರೆಸ್ ಭವನದ ಬಳಿ ನಲಪಾಡ್ ಮತ್ತು ಟೀಂ ನ ರಸ್ತೆ ಸಂಚಾರ ತಡೆದು ಪಂಜಿನ ಮೆರವಣಿಗೆ ನಡೆಸಿದ್ದರು. ಈ ರೋಪದ ಮೇಲೆ ಕಾಂಗ್ರೆಸ್ ಯುವ ಮುಖಂಡ ಮೊಹಮ್ಮದ್ ನಲಪಾಡ್ ಸೇರಿ 25 ಮಂದಿ ವಿರುದ್ಧ ಎಫ್ ಐ ಆರ್ ದಾಖಲಾಗಿದೆ.
ಪಂಜಿನ ಮೆರವಣಿಗೆ ನಡೆಸಿ ರಸ್ತೆ ಸಂಚಾರಕ್ಕೆ ತಡೆಯೊಡ್ಡಿದ ಹಿನ್ನೆಲೆ ಹಾಗೂ ಸಾರ್ವಜನಿಕರಿಗೆ ತೊಂದರೆ ನೀಡಿದ ಹಿನ್ನೆಲೆ ಹೈಗ್ರೌಂಡ್ಸ್ ಠಾಣೆಯಲ್ಲಿ ನಲಪಾಡ್ ಸೇರಿ 25 ಮಂದಿ ವಿರುದ್ಧ ಎಫ್ ಐ ಆರ್ ದಾಖಲಾಗಿದೆ ಎಂದು ತಿಳಿದು ಬಂದಿದೆ.