ಇರಾಕ್‌ನ ಉತ್ತರ ನಗರ ಎರ್ಬಿಲ್ ಬಳಿಯ ವಿಶ್ವವಿದ್ಯಾಲಯದ ವಸತಿ ನಿಲಯದಲ್ಲಿ ಶುಕ್ರವಾರ ಸಂಜೆ (ಸ್ಥಳೀಯ ಸಮಯ) ಕನಿಷ್ಠ 14 ಜನರು ಸಾವನ್ನಪ್ಪಿದ್ದಾರೆ ಮತ್ತು 18 ಜನರು ಗಾಯಗೊಂಡಿದ್ದಾರೆ ಎಂದು ಸ್ಥಳೀಯ ಆರೋಗ್ಯ ನಿರ್ದೇಶನಾಲಯದ ಮುಖ್ಯಸ್ಥರು ತಿಳಿಸಿದ್ದಾರೆ.
ಎರ್ಬಿಲ್‌ನ ಪೂರ್ವದಲ್ಲಿರುವ ಸಣ್ಣ ನಗರ ಸೊರಾನ್ನಲ್ಲಿರುವ ಕಟ್ಟಡದಲ್ಲಿ ಬೆಂಕಿ ಕಾಣಿಸಿಕೊಂಡಿದೆ ಎಂದು ಸೊರಾನ್ ಆರೋಗ್ಯ ನಿರ್ದೇಶನಾಲಯದ ಮುಖ್ಯಸ್ಥ ಕಾಮರಾಮ್ ಮುಲ್ಲಾ ಮೊಹಮ್ಮದ್ ತಿಳಿಸಿದ್ದಾರೆ. ಸಾವಿನ ಸಂಖ್ಯೆಯನ್ನು ರಾಜ್ಯ ಮಾಧ್ಯಮಗಳು ದೃಢಪಡಿಸಿವೆ. ಶುಕ್ರವಾರ ರಾತ್ರಿಯ ವೇಳೆಗೆ ಬೆಂಕಿಯನ್ನು ನಂದಿಸಲಾಗಿದೆ ಎಂದು ಸ್ಥಳೀಯ ಸುದ್ದಿ ಸಂಸ್ಥೆ ರುಡಾವ್ ವರದಿ ಮಾಡಿದೆ.