Friday, July 19, 2024

ಕಾಲೇಜಿನ ಶೌಚಾಲಯದಲ್ಲಿ ಮಗುವಿಗೆ ಜನ್ಮ ನೀಡಿದ ವಿದ್ಯಾರ್ಥಿನಿ

ಕೋಲಾರ: ಅಪ್ರಾಪ್ತೆಯೊಬ್ಬಳು ಕಾಲೇಜಿನಲ್ಲೇ ಮಗುವಿಗೆ ಜನ್ಮ ನೀಡಿರುವ ಘಟನೆ ಕೋಲಾರ ಹೊರ ವಲಯದ ಖಾಸಗಿ ಕಾಲೇಜಿನಲ್ಲಿ ನಡೆದಿದೆ. ಖಾಸಗಿ ಕಾಲೇಜಿನಲ್ಲಿ ಪ್ರಥಮ ಪಿಯುಸಿಯಲ್ಲಿ ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿನಿ ಕಾಲೇಜಿನ ಶೌಚಾಲಯದಲ್ಲಿ ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾಳೆ. ಇದರಿಂದ ಕಾಲೇಜು ಉಪನ್ಯಾಸಕರು, ಸಹಪಾಠಿಗಳು ದಂಗಾಗಿದ್ದಾರೆ.

ಸದ್ಯ ವಿದ್ಯಾರ್ಥಿಯನ್ನು ಸಹ ಆರ್.ಎಲ್.ಜಾಲಪ್ಪ ಆಸ್ಪತ್ರೆಗೆ ದಾಖಲು ಮಾಡಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಈ ಬಗ್ಗೆ ಕೋಲಾರ ಮಹಿಳಾ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದು, ಮಗು ಕರುಣಿಸಿದ ಯುವಕನಿಗಾಗಿ ಹುಡುಕಾಟ ನಡೆಸಿದ್ದಾರೆ.

ಅಚ್ಚರಿ ಏನಂದರೆ ಈ ಪ್ರಕರಣದಲ್ಲಿ ಹಲವು ಪ್ರಶ್ನೆಗಳು ಉದ್ಭವಿಸಿವೆ. ವಿದ್ಯಾರ್ಥಿನಿಗೆ ತಾನು ಗರ್ಭಿಣಿ ಎನ್ನುವುದು ಗೊತ್ತೇ ಇರಲಿಲ್ವಾ? ಅಥವಾ ಮನೆಯಲ್ಲಿ ಪೋಷಕರು, ಬಾಲಕಿಯ ದೇಹದಲ್ಲಿ ಬದಲಾವಣೆ ಗಮನಿಸಿಲ್ವಾ ಅಂತ? ಹೀಗೆ ಹತ್ತು ಹಲವು ಪ್ರಶ್ನೆಗಳು ಉದ್ಭವಿಸಿವೆ.

Related Articles

Latest Articles