ಪ್ಯಾರಿಸ್ ಒಲಿಂಪಿಕ್ಸ್ 2024 ಗೆ ಅದ್ಧೂರಿ ಚಾಲನೆ ದೊರೆತಿದೆ. ಫ್ರಾನ್ಸ್ ರಾಜಧಾನಿ ಸೀನ್ ನದಿಯ ತಟದಲ್ಲಿ ನಡೆದ ಅತ್ಯಾಕರ್ಷಕ ಉದ್ಘಾಟನಾ ಸಮಾರಂಭಕ್ಕೆ ಸಾವಿರಾರು ಮಂದಿ ಸಾಕ್ಷಿಯಾದರು.
ವಿಶೇಷ ಎಂದರೆ ಈ ಬಾರಿ ಪರೇಡ್ ಆಫ್ ನೇಷನ್ಸ್ ಅನ್ನು ನದಿಯಲ್ಲಿ ಆಯೋಜಿಸಲಾಗಿತ್ತು. ಸಾಮಾನ್ಯವಾಗಿ ಸ್ಟೇಡಿಯಂ ಒಳಗೆ ನಡೆಯುವ ಕ್ರೀಡಾಪಟುಗಳ ಮೆರವಣಿಗೆಯು ಈ ಸಲ ಬೋಟ್ಗಳಲ್ಲಿ ಆಯೋಜಿಸಿ ಪ್ರೇಕ್ಷರನ್ನು ಭವ್ಯತೆ ಮತ್ತು ಸಾಂಕೇತಿಕವಾಗಿ ಆಕರ್ಷಿಸಿತು.
ಈ ಪರೇಡ್ನಲ್ಲಿ ಭಾರತವನ್ನು ಪಿವಿ ಸಿಂಧು ಹಾಗೂ ಶರತ್ ಕಮಲ್ ಮುನ್ನಡೆಸಿದ್ದರು. ಆಸ್ಟರ್ಲಿಟ್ಜ್ ಸೇತುವೆಯ ಭಾಗದಿಂದ ಶುರುವಾದ ಪರೇಡ್ ಆಫ್ ನೇಷನ್ಸ್ ಮೆರವಣಿಯಲ್ಲಿ 85 ದೋಣಿಗಳು 6,800 ಕ್ಕೂ ಹೆಚ್ಚು ಕ್ರೀಡಾಪಟುಗಳು ಕಾಣಿಸಿಕೊಂಡಿದ್ದರು.
Indian contingent stole the show when they entered the Parade of Nations for the opening ceremony of the Paris Olympics 2024 on Friday.