ಡೆಹ್ರಾಡೂನ್: ಹದಿನೈದು ವರ್ಷದ ಮಗಳ ಮೇಲೆ ಅತ್ಯಾಚಾರ ಎಸಗಿದ ಆರೋಪದ ಮೇಲೆ ಒಂದೂವರೆ ವರ್ಷ ಜೈಲಿನಲ್ಲಿದ್ದ 43 ವರ್ಷದ ವ್ಯಕ್ತಿಯನ್ನು ಹರಿದ್ವಾರದ ವಿಶೇಷ ಪೋಕ್ಸ್ ನ್ಯಾಯಾಲಯ ಖುಲಾಸೆಗೊಳಿಸಿದೆ.
ದಂಪತಿ ನಡುವೆ ಆಸ್ತಿ ವಿವಾದವಿದ್ದು, ಜಮೀನು ನೀಡುವಂತೆ ಒತ್ತಾಯಿಸಿ ಮಹಿಳೆ ಸುಳ್ಳು ಪ್ರಕರಣ ದಾಖಲಿಸಿದ್ದಾರೆ ಎಂದು ತನಿಖೆಯಿಂದ ತಿಳಿದುಬಂದಿದೆ ಎಂದು ನ್ಯಾಯಾಲಯ ಹೇಳಿದೆ.
ಇದಲ್ಲದೆ ಬಾಲಕಿಯ ವೈದ್ಯಕೀಯ ವರದಿಯಲ್ಲಿ ಆಕೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಲಾಗಿದೆ ಎಂದು ಸೂಚಿಸುವ ಯಾವುದೇ ಗುರುತುಗಳಿಲ್ಲ ಎಂದು ಹೇಳಲಾಗಿದೆ.
ಪೊಲೀಸರ ಪ್ರಕಾರ, ಸಹೋದರನ ಮನೆಯಲ್ಲಿ ಒಂದು ತಿಂಗಳ ಕಾಲ ಉಳಿಯಲು ಮಕ್ಕಳನ್ನು ಮನೆಯಲ್ಲಿ ಬಿಟ್ಟು ಹೋಗಿದ್ದ ಸಮಯದಲ್ಲಿ ತನ್ನ ಪತಿ ಹಿರಿಯ ಮಗಳ ಮೇಲೆ ಅತ್ಯಾಚಾರವೆಸಗಿದ್ದಾನೆ. ಹೋದರನ ಮನೆಯಿಂದ ಹಿಂತಿರುಗಿದ ನಂತರ ವಿಷಯ ತಿಳಿಯಿತು ಎಂದು 2021ರ ನವೆಂಬರ್‌ನಲ್ಲಿ ಹರಿದ್ವಾರದ ಮಾಂಗ್ಲೆರ್ ಪೊಲೀಸ್ ಠಾಣೆಯಲ್ಲಿ ಪತ್ನಿ ದೂರು ದಾಖಲಿಸಿದ್ದಳು.
ವಿಷಯ ತಿಳಿಸಿದರೆ ತನ್ನ ತಂದೆ ಕೊಲ್ಲುವುದಾಗಿ ಬೆದರಿಕೆ ಹಾಕಿದ್ದರು ಎಂದು ಹಿರಿಯ ಮಗಳು ಹೇಳಿಕೆ ನೀಡಿದ್ದಳು. ತನಿಖೆ ಬಳಿಕ ಪೊಲೀಸರು ಆರೋಪಿಯನ್ನು ಮೇ 2022ರಲ್ಲಿ ಬಂಧಿಸಿ, ಜೈಲಿಗೆ ಕಳುಹಿಸಿದ್ದರು. ಆದರೆ ಪ್ರಾಸಿಕ್ಯೂಷನ್ ಪ್ರಕರಣವನ್ನು ಸಾಬೀತುಪಡಿಸುವಲ್ಲಿ ವಿಫಲವಾಗಿದೆ.