ಗದಗ: ನಗರದ ಒಂದೇ ಕುಟುಂಬದ ನಾಲ್ವರ ಹತ್ಯೆಗೈದಿದ್ದ ಆರೋಪಿಯ ಸ್ಥಳ ಮಹಜರಿಗೆ ತೆರಳಿದ್ದ ವೇಳೆ ಪೊಲೀಸರ ಮೇಲೆ ಹಲ್ಲೆಗೆ ಯತ್ನಿಸಿ ಪರಾರಿಯಾಗಲು ಯತ್ನಿಸಿದ್ದ ಆರೋಪಿಯ ಕಾಲಿಗೆ ಪೊಲೀಸರು ಗುಂಡು ಹಾರಿಸಿದ್ದಾರೆ.
ಸ್ಥಳ ಮಹಜರಿಗೆ ತೆರಳಿದ್ದ ವೇಳೆ ಎ-2 ಆರೋಪಿ ಫೈರೋಜ್ ಶಲವಡಿ-ನರಗುಂದ ಮಾರ್ಗ ಮಧ್ಯೆ ಮೂತ್ರ ವಿಸರ್ಜನೆ ನೆಪ ಹೇಳಿ ಜೀಪ್ ನಿಲ್ಲಿಸಲು ಹೇಳಿದ್ದಾನೆ. ಬಳಿಕ ಕೆಳಗಿಳಿದು ಸ್ಥಳದಲ್ಲಿದ್ದ ಬಾಟಲ್ ಒಂದನ್ನು ತೆಗೆದುಕೊಂಡು ಪಿಎಸ್‍ಐ ಶಿವಾನಂದ ಪಾಟೀಲ್ ಮೇಲೆ ಹಲ್ಲೆ ನಡೆಸಿ ಪರಾರಿಯಾಗಲು ಯತ್ನಿಸಿದ್ದಾನೆ. ಈ ವೇಳೆ ಪೊಲೀಸರು ಆರೋಪಿಯ ಕಾಲಿಗೆ ಗುಂಡು ಹಾರಿಸಿದ್ದಾರೆ.
ಆರೋಪಿ ನರಗುಂದ ಬಳಿ ಮೊಬೈಲ್ ಎಸೆದು ಹೋಗಿದ್ದ. ಈ ಸಂಬಂಧ ಪೊಲೀಸರು ಆರೋಪಿಯನ್ನು ಸ್ಥಳ ಮಹಜರಿಗೆ ಕರೆದೊಯ್ದಿದ್ದಾಗ ಈ ಘಟನೆ ನಡೆದಿದೆ. ನರಗುಂದ ತಾಲೂಕು ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ಕೊಡಿಸಿ, ಹೆಚ್ಚಿನ ಚಿಕಿತ್ಸೆಗೆ ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆಗೆ ದಾಖಲಿಸಿದ್ದಾರೆ.