ಕಣ್ಣೂರು: ಮನೆ ಮುಂಭಾಗದ ರಸ್ತೆಯಲ್ಲಿ ಆಟವಾಡುತ್ತಿದ್ದ ಐದು ವರ್ಷದ ಬಾಲಕಿಯೊಬ್ಬಳಿಗೆ ಕಾರು ಡಿಕ್ಕಿ ಹೊಡೆದು ಮೃತಪಟ್ಟ ಘಟನೆ ವರದಿಯಾಗಿದೆ.
ಮಂಬರಂ ಪರಂಬೈ ನಿವಾಸಿಗಳಾದ ಅಬ್ದುಲ್ ನಾಸರ್ ಮತ್ತು ಹಸ್ನಮ್ ದಂಪತಿಯ ಪುತ್ರಿ ಸಂಹಾ ಮರಿಯಮ್ (5) ಮೃತಪಟ್ಟ ಬಾಲಕಿ.
ಮನೆ ಮುಂಭಾಗದ ರಸ್ತೆಯಲ್ಲಿ ಆಟವಾಡುತ್ತಿದ್ದಾಗ ಮಗುವಿಗೆ ಕಾರು ಡಿಕ್ಕಿ ಹೊಡೆದಿದೆ. ಮಗುವಿಗೆ ಗಂಭೀರವಾಗಿ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಿದ್ದಾರೆ. ಆದರೆ ಚಿಕಿತ್ಸೆ ಫಲಿಸದೆ ಅಸುನೀಗಿದ್ದಾರೆ. ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ.