ಮಾಜಿ ಡಾನ್ ಮುತ್ತಪ್ಪ ರೈ ಪುತ್ರ ರಿಕ್ಕಿ ರೈ ಮೇಲೆ ದುಷ್ಕರ್ಮಿಗಳು ಫೈರಿಂಗ್ ಮಾಡಿದ ಘಟನೆ ರಾಮನಗರ ತಾಲೂಕಿನ ಬಿಡದಿಯ ಮುತ್ತಪ್ಪ ರೈ ಮನೆ ಬಳಿಯೇ ನಡೆದಿದೆ.
ಬಿಡದಿಯಿಂದ ಬೆಂಗಳೂರಿಗೆ ಕಾರಿನಲ್ಲಿ ತೆರಳುತ್ತಿದ್ದ ರಿಕ್ಕಿ ರೈ, ಪ್ರತಿ ಬಾರಿ ಅವರೇ ಕಾರು ಚಲಾಯಿಸುತ್ತಿದ್ದರು. ಇದೇ ಕಾರಣಕ್ಕೆ ಡ್ರೈವಿಂಗ್ ಸೀಟ್ ಟಾರ್ಗೆಟ್ ಮಾಡಿದ ದುಷ್ಕರ್ಮಿಗಳು ಮನೆಯ ಕೂಗಳತೆ ದೂರದಲ್ಲೇ ರಾತ್ರಿ ಸುಮಾರು 11.30ಕ್ಕೆ ರಿಕ್ಕಿ ರೈ ಮೇಲೆ ಎರಡು ಸುತ್ತಿನ ಗುಂಡಿನ ದಾಳಿ ಮಾಡಿದ್ದಾರೆ. ಆದರೆ ಹಿಂಬದಿ ಸೀಟ್ನಲ್ಲಿದ್ದ ರಿಕ್ಕಿ ರೈಗೆ ಮೂಗು, ಕೈಗೆ ಗುಂಡು ತಾಕಿದ್ದು, ಸದ್ಯ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
2 ದಿನದ ಹಿಂದಷ್ಟೇ ರಷ್ಯಾದಿಂದ ವಾಪಸ್ ಆಗಿದ್ದ ರಿಕ್ಕಿ ರಿಯಲ್ ಎಸ್ಟೇಟ್ ಬಿಸಿನೆಸ್ನಲ್ಲಿ ಆಕ್ಟಿವ್ ಆಗಿದ್ದರು. ನಿನ್ನೆ ಮನೆಯಿಂದ ತಡರಾತ್ರಿ ತನ್ನ ಫಾರ್ಚ್ಯೂನರ್ ಕಾರಲ್ಲಿ ಬೆಂಗಳೂರಿಗೆ ಹೊರಟಿದ್ದರು. ಸುಮಾರು 11.30 ರ ಹೊತ್ತಿಗೆ ಮನೆಯಿಂದ ಹೊರಬರ್ತಿದ್ದಂತೆ ಗೇಟ್ ಬಳಿ ದುಷ್ಕರ್ಮಿಗಳು ಫೈರಿಂಗ್ ನಡೆಸಿದ್ದಾರೆ. 70 ಎಂಎಂ ಬುಲೆಟ್ನ ಶಾಟ್ಗನ್ ಬಳಸಿ ಫೈರಿಂಗ್ ಮಾಡಲಾಗಿದೆ.
ಖಾಸಗಿಯವರಿಗೆ ಸೇರಿದ, ರಸ್ತೆ ಪಕ್ಕದ ಕಾಂಪೌಂಡ್ ಗ್ಯಾಪ್ ಮಧ್ಯೆ ಬಚ್ಚಿಟ್ಟುಕೊಂಡು ದುಷ್ಕರ್ಮಿ ದಾಳಿ ಮಾಡಿದ್ದಾನೆ. ಅಂದರೆ ಕಾರು ಬೆಂಗಳೂರಿಗೆ ಹೊರಡುತ್ತಿರಬೇಕಾದರೆ ಬಲಗಡೆ ಭಾಗದಲ್ಲಿ ಒಂದು ಕಾಂಪೌಂಡ್ ಗ್ಯಾಪ್ ಮಧ್ಯೆ ಅವಿತುಕೊಂಡು, ಅದರ ಒಂದು ರಂಧ್ರದಿಂದಲೇ ಫೈರಿಂಗ್ ಆಗಿದೆ.
ರಿಕ್ಕಿ ರೈ ಜತೆಗೆ ಗನ್ ಮ್ಯಾನ್ ಇದ್ದು, ಚಾಲಕ ಕಾರು ಚಲಾಯಿಸ್ತಿದ್ದ. ಹಿಂಬದಿ ಸೀಟ್ನಲ್ಲಿ ರಿಕ್ಕಿ ರೈ ಕುಳಿತಿದ್ದರು. ಪೊಲೀಸರ ಮಾಹಿತಿ ಪ್ರಕಾರ 70mm ಬುಲೆಟ್ನ ಶಾಟ್ಗನ್ ಬಳಸಿ ಫೈರಿಂಗ್ ನಡೆಸಲಾಗಿದೆ. ಒಂದು ಬಾರಿ ಮಾತ್ರ ಗುಂಡು ಹಾರಿಸಿದ್ದು, ಕಾರಿನ ಡೋರ್ ಸೀಳಿ ಬಂದ ಬುಲೆಟ್, ಡ್ರೈವರ್ ಸೀಟ್ ಕುಶನ್ ಒಳಗೆ ನುಗ್ಗಿದೆ. ನಂತರ ಕಾರಿನ ಹಿಂಬದಿ ಸೀಟ್ನ ಎಡಭಾಗದ ಡೋರ್ಗೆ ತಾಗಿದೆ. ಈ ವೇಳೆ ಡ್ರೈವರ್ ಬೆನ್ನಿಗೆ ಹಾಗೂ ರಿಕ್ಕಿ ರೈ ಮೂಗು ಹಾಗೂ ಕೈಗೆ ಗಾಯವಾಗಿದೆ.
ರಿಕ್ಕಿ ರೈ ಹತ್ಯೆಗೆ ಪೂರ್ವ ನಿಯೋಜಿತ ಸಂಚು ನಡೆದಿತ್ತಾ ಎಂಬ ಅನುಮಾನಗಳು ಹುಟ್ಟುಕೊಂಡಿವೆ. ಎರಡು ದಿನಗಳ ಹಿಂದೆ ರಷ್ಯಾದಿಂದ ಬಂದಿರುವ ರಿಕ್ಕಿ ರೈ ಬಿಡದಿ ಮನೆಯಿಂದ ಬೆಂಗಳೂರಿಗೆ ತೆರಳುತ್ತಿದ್ದ. ಈ ವೇಳೆ ಹಿಂಬಾಲಿಸಿ ಕಾದು ಕೃತ್ಯ ಎಸಗಲಾಗಿದೆ.
ಸದ್ಯ ಪರಿಶೀಲನೆ ವೇಳೆ ಪೊಲೀಸರಿಗೆ ದುಷ್ಕರ್ಮಿಯ ಕ್ಲ್ಯೂ ಸಿಕ್ಕಿದೆ ಎನ್ನಲಾಗುತ್ತಿದೆ. ಜತೆಗೆ ಎರಡು ಬುಲೆಟ್ ಹಾಗೂ ಒಂದು ಮೊಬೈಲ್ ಪತ್ತೆಯಾಗಿದ್ದು, ಕಿರಾತಕನ ಪತ್ತೆಗೆ ಬಲೆ ಬೀಸಿದ್ದಾರೆ.