ತೆಲಂಗಾಣದಲ್ಲಿ ತಾಳೆ ಮರದ ಮೇಲೆಯೇ ಹೃದಯಾಘಾತದಿಂದ ವ್ಯಕ್ತಿಯೊಬ್ಬರು ಸಾವನ್ನಪ್ಪಿದ್ದಾರೆ. ತೆಲಂಗಾಣದ ಭುವನಗಿರಿ ನಗರದಲ್ಲಿ ಈ ದಾರುಣ ಘಟನೆ ನಡೆದಿದೆ.
ತಾಳೆ ಮರದಿಂದ ಮೃತ ವ್ಯಕ್ತಿಯನ್ನು ಕೆಳಗಿಳಿಸುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಕಾಣಿಸಿಕೊಂಡಿದೆ.
ಮೃತ ವ್ಯಕ್ತಿಯನ್ನು ಲಕ್ಷ್ಮಯ್ಯ ಎಂದು ಗುರುತಿಸಲಾಗಿದೆ. ಇವರು ರಾಜಣ್ಣಗುಡೆಂ ಗ್ರಾಮದ ನಿವಾಸಿಯಾಗಿದ್ದಾರೆ.
ಲಕ್ಷ್ಮಯ್ಯ ಅವರು ತಾಳೆ ಮರಗಳಿಂದ ನೀರಾ ತೆಗೆಯಲು ಮರ ಹತ್ತಿದ್ದಾರೆ. ಲಕ್ಷ್ಮಯ್ಯ ಅವರು ಮರದ ಮೇಲೆ ಇದ್ದಾಗಲೇ ಹೃದಯಾಘಾತಕ್ಕೆ ಒಳಗಾಗಿದ್ದಾರೆ. ತಾಳೆ ಮರದಲ್ಲಿ ತಲೆಕೆಳಗಾಗಿ ನೇಣು ಬಿಗಿದ ಸ್ಥಿತಿಯಲ್ಲಿ ಆತನ ಶವ ಪತ್ತೆಯಾಗಿದೆ.
ವಿಷಯ ತಿಳಿದು ಸ್ಥಳಕ್ಕೆ ಆಗಮಿಸಿದ ಅಧಿಕಾರಿಗಳು ಕ್ರೇನ್ ತರಿಸಿ ಮೃತದೇಹವನ್ನು ಕೆಳಗೆ ಇಳಿಸಿದ್ದಾರೆ. ವಿಡಿಯೋದಲ್ಲಿ ವ್ಯಕ್ತಿಯೊಬ್ಬ ಕ್ರೇನ್ ನ ಹುಕ್‌ಗೆ ಕಟ್ಟಿ ಶವವನ್ನು ಮರದಿಂದ ಕೆಳಗೆ ಎಳೆದಿರುವುದು ಕಂಡುಬಂದಿದೆ. ಹೃದಯಾಘಾತಕ್ಕೆ ಕಾರಣವೇನು ಎಂಬುದು ಸ್ಪಷ್ಟವಾಗಿಲ್ಲ.