Friday, June 13, 2025

ಧಾರಾಕಾರ ಮಳೆ: ಚಾರ್ಮಾಡಿ ಘಾಟ್‌ನಲ್ಲಿ ಮತ್ತೊಮ್ಮೆ ಗುಡ್ಡ ಕುಸಿತ – ಹೆಚ್ಚಿದ ಟ್ರಾಫಿಕ್ ಜಾಮ್

ಪಶ್ಚಿಮ ಘಟ್ಟ ಪ್ರದೇಶಗಳಲ್ಲಿ ಕಳೆದ ಎರಡು ಗಂಟೆಗಳಿಂದ ಭಾರಿ ಮಳೆಯಾಗುತ್ತಿದೆ.‌ ಇದರ ಪರಿಣಾಮ ಮೂಡಿಗೆರೆ ತಾಲೂಕಿನ ಚಾರ್ಮಾಡಿ ಘಾಟ್​ನಲ್ಲಿ ಸಾಲು ಸಾಲು ಗುಡ್ಡ ಕುಸಿತವಾಗಿದೆ.

ಮತ್ತೊಂದೆಡೆ ಮಳೆ ನೀರು ರಸ್ತೆಯ ಮೇಲೆ ನದಿಯಂತೆ ಹರಿಯುತ್ತಿದೆ. ಇದರಿಂದ ಚಾರ್ಮಾಡಿ ಘಾಟ್‌ನಲ್ಲಿ ಭಾರೀ ಟ್ರಾಫಿಕ್ ಜಾಮ್ ಉಂಟಾಗಿದ್ದು, ಹಿಂದಕ್ಕೆ ಹೋಗದೇ ಮುಂದಕ್ಕೆ ಹೋಗಲು ಆಗದೇ ವಾಹನ ಸವಾರರು ತೀವ್ರ ಪರದಾಡುತ್ತಿದ್ದಾರೆ.

ಕೊಟ್ಟಿಗೆಹಾರ, ಬಾಳೂರು, ಬಣಕಲ್ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಇಂದು (ಅಕ್ಟೋಬರ್ 09) ಸಂಜೆ ಕಳೆದ ಎರಡು ಗಂಟೆಯಿಂದ ನಿರಂತರವಾಗಿ ಎಡಬಿಡದೇ ಮಳೆಯಾಗುತ್ತಿದೆ.

ಈ ಹಿನ್ನೆಲೆಯಲ್ಲಿ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಚಾರ್ಮಾಡಿ ಘಾಟಿನಲ್ಲಿ ಗುಡ್ಡ ಕುಸಿದಿದೆ. ಭಾರೀ ಮಳೆಯಿಂದಾಗಿ ಚಿಕ್ಕಮಗಳೂರು-ದಕ್ಷಿಣ ಕನ್ನಡ ಜಿಲ್ಲೆಗೆ ಸಂಪರ್ಕಿಸುವ ಚಾರ್ಮಾಡಿ ಘಾಟಿಯಲ್ಲಿ ಫುಲ್ ಟ್ರಾಫಿಕ್ ಜಾಮ್ ಆಗಿದೆ.

Related Articles

Latest Articles