Saturday, June 28, 2025

ಕರ್ನಾಟಕದಾದ್ಯಂತ ಆಗಸ್ಟ್ 6ರವರೆಗೆ ಭಾರಿ ಮಳೆ

ಕರ್ನಾಟಕದ ಹಲವೆಡೆ ಭಾರಿ ಮಳೆಯಾಗುತ್ತಿದೆ, ಕಳೆದ ಎರಡು ವಾರದಿಂದ ನಿರಂತರವಾಗಿ ಸುರಿಯುತ್ತಿರುವ ಮಳೆಯು ಅನಾಹುತಗಳನ್ನು ಸೃಷ್ಟಿಸಿದೆ.

ಅದೇ ರೀತಿ ಮಳೆ ಆಗಸ್ಟ್ 6ರವರೆಗೂ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ದಕ್ಷಿಣ ಕನ್ನಡ ಜಿಲ್ಲೆಗೆ ರೆಡ್ ಅಲರ್ಟ್​ ಘೋಷಣೆ ಮಾಡಲಾಗಿದೆ.

ಉಡುಪಿ, ಉತ್ತರ ಕನ್ನಡ, ಕೊಡಗು ಜಿಲ್ಲೆಗಳಿಗೆ ಆರೆಂಜ್ ಅಲರ್ಟ್​, ಶಿವಮೊಗ್ಗ, ಚಿಕ್ಕಮಗಳೂರು, ಬೆಳಗಾವಿ ಜಿಲ್ಲೆಗೆ ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ.

ಇನ್ನು ಉಳಿದ ಜಿಲ್ಲೆಗಳಲ್ಲೂ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಸೂಚನೆ‌ ನೀಡಿದೆ.

Related Articles

Latest Articles