Friday, July 19, 2024

ಹಿಜಾಬ್ ನಿಷೇಧ ವಾಪಾಸ್ ಪಡೆಯಲು ಸಿಎಂ ಸಿದ್ದರಾಮಯ್ಯ ಸೂಚನೆ

ಕರ್ನಾಟದ ಉಡುಪಿಯಿಂದ ಆರಂಭಗೊಂಡಿದ್ದ ಹಿಜಾಬ್ ಹೋರಾಟ ದೇಶಾದ್ಯಂತ ಭಾರಿ ಪ್ರತಿಭಟನೆ, ಹೋರಾಟಕ್ಕೆ ಕಾರಣವಾಗಿತ್ತು. ಈ ಪ್ರಕರಣ ಸುಪ್ರೀಂ ಕೋರ್ಟ್ ಮೆಟ್ಟಿಲೇರಿತ್ತು.

ಕೋರ್ಟ್, ಹಿಜಾಬ್ ಇಸ್ಲಾಂ ಧರ್ಮದ ಕಡ್ಡಾಯವಲ್ಲ. ಶಾಲಾ ಕಾಲೇಜು ಆಡಳಿತ ಮಂಡಳಿ ನಿರ್ಧರಿಸಿದ ಸಮವಸ್ತ್ರ ಧರಿಸಬೇಕು ಎಂದು ಸೂಚಿಸಿತ್ತು. ಹಿಂದಿನ ಬಿಜೆಪಿ ಸರ್ಕಾರದ ವೇಳೆ ನಡೆದ ಈ ಹಿಜಾಬ್ ಗಲಾಟೆ ರಾಜಕೀಯ ಗುದ್ದಾಟಕ್ಕೂ ಕಾರಣಾಗಿತ್ತು.

ಇದೀಗ ಮುಖ್ಯಮಂತ್ರಿ ಸಿದ್ದರಾಮಯ್ಯ ಮಹತ್ವದ ಘೋಷಣೆ ಮಾಡಿದ್ದಾರೆ. ರಾಜ್ಯದಲ್ಲಿ ಹಿಜಾಬ್ ನಿಷೇಧ ಆದೇಶ ವಾಪಸ್ ಪಡೆಯುತ್ತೇವೆ ಎಂದಿದ್ದು ಮತ್ತೆ ಹಿಜಾಬ್ ವಿವಾದ ಮುನ್ನಲೆಗೆ ಬಂದು ಪರ ವಿರೋಧ ವ್ಯಕ್ತವಾಗುತ್ತಿದೆ.

Related Articles

Latest Articles