ನೇಹಾ ಹತ್ಯೆ ಬೆನ್ನಲ್ಲೇ ಹುಬ್ಬಳ್ಳಿಯಲ್ಲಿ ದಿನಕ್ಕೊಂದು ಅಘಾತಕಾರಿ ಪ್ರಕರಣಗಳು ಹೊರಬರುತ್ತಿವೆ. ಅನ್ಯಕೋಮಿನ ಯುವಕನೊಬ್ಬ ದಲಿತ ಅಪ್ರಾಪ್ತೆಯನ್ನ ಗರ್ಭಿಣಿ ಮಾಡಿ ಎಸ್ಕೇಪ್ ಆಗಿದ್ದ ಪ್ರಕರಣವೊಂದು ತಡವಾಗಿ ಬೆಳಕಿಗೆ ಬಂದಿದೆ. ಘಟನೆ ತೀವ್ರ ಸ್ವರೂಪ ಪಡೆದುಕೊಳ್ತಿದ್ದಂತೆ ಅಲರ್ಟ್ ಆದ ಪೊಲೀಸರು ಯುವಕನನ್ನ ಬಂಧಿಸಿದ್ದಾರೆ.
With input from Newsfirst Kannada
ಹುಬ್ಬಳ್ಳಿ ನವನಗರದ ಎಪಿಎಂಸಿ ಠಾಣೆ ವ್ಯಾಪ್ತಿಯಲ್ಲಿ 16 ವರ್ಷದ ಅಪ್ರಾಪ್ತೆ ಮೇಲೆ ಅನ್ಯಕೋಮಿನ ಯುವಕನೊಬ್ಬ ಅತ್ಯಾಚಾರ ನಡೆಸಿರುವ ಆರೋಪ ಕೇಳಿ ಬಂದಿದೆ. ಹೊಟ್ಟೆ ನೋವಿನಿಂದ ಬಳಲುತಿದ್ದ ಬಾಲಕಿಯನ್ನ ಪೋಷಕರು ಆಸ್ಪತ್ರೆಗೆ ಕರೆದೊಯ್ದಾಗ ಸತ್ಯ ಹೊರಬಿದ್ದಿದೆ. ಆಪ್ರಾಪ್ತೆ ಗರ್ಭಿಣಿಯಾಗಿದ್ದ ವಿಷಯ ತಿಳಿಯುತ್ತಿದ್ದಂತೆ ಆರೋಪಿ ಸದ್ದಾಂ ಹುಸೇನ್ ಎಸ್ಕೇಪ್ ಆಗಿದ್ದ.
ಸದ್ದಾಂ ಹಾಗೂ ಅಪ್ರಾಪ್ತೆ ಒಂದೇ ಕಾಲೇಜಿನಲ್ಲಿ ಓದ್ತಿದ್ದರು. ಸ್ನೇಹ, ಸಲುಗೆ ಅಪ್ರಾಪ್ತೆ ಮೇಲೆ ಆರೋಪಿ ಬಲವಂತವಾಗಿ ಅತ್ಯಾಚಾರ ಎಸಗಿದ್ದಾನೆ ಎನ್ನಲಾಗಿದೆ. ಈ ವಿಚಾರ ಮನೆಯಲ್ಲಿ ಹೇಳಿದ್ರೆ ಕೊಲೆ ಮಾಡುವ ಬೆದರಿಕೆ ಹಾಕಿದ್ದನಂತೆ. ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಿದ್ದಾರೆ.