ಚಾಕುವಿನಿಂದ ಇರಿದು ಯುವಕನನ್ನು ಬರ್ಬರ ಹತ್ಯೆ ಮಾಡಿದ ಘಟನೆ ಹುಬ್ಬಳಿಯ ಬೆಂಗೇರಿಯ ವೆಂಕಟೇಶ್ವರ ಕಾಲನಿಯಲ್ಲಿ ನಡೆದಿದೆ.
ವ್ಯಕ್ತಿಯೊಬ್ಬ ಸ್ಮಾರ್ಟ್ ವಾಚ್ ವಿಚಾರಕ್ಕೆ ಜಗಳ ತೆಗೆದು ಎದೆ ಮತ್ತು ಹೊಟ್ಟೆಗೆ ಚಾಕುವಿನಿಂದ ಇರಿದು ಯುವಕನನ್ನು ಕೊಲೆ ಮಾಡಿದ್ದಾನೆ.
ಅಸ್ಲಂ ಮಕಾಂದಾರ್ (30) ಕೊಲೆಯಾದ ಯುವಕ. ಮಂಜುನಾಥ್ ಕೊಲೆ ಮಾಡಿದ ಆರೋಪಿ.
ಚಾಕುವಿನಿಂದ ಹಲ್ಲೆಗೊಳಗಾದ ಬಳಿಕ ರಕ್ತದ ಮಡುವಿನಲ್ಲಿ ಬಿದ್ದಿದ್ದ ಅಸ್ಲಂನನ್ನು ಸ್ನೇಹಿತರು ಕಿಮ್ಸ್ ಆಸ್ಪತ್ರೆಗೆ ದಾಖಲಿಸಿದ್ದರು. ಅದರೆ, ಚಿಕಿತ್ಸೆ ಫಲಿಸದೆ ಕಿಮ್ಸ್ ಆಸ್ಪತ್ರೆಯಲ್ಲಿ ಮೃತಪಟ್ಟರು. ಕೇಶ್ವಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿ ಮಂಜುನಾಥನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.