Wednesday, February 19, 2025

ಹೆಣ್ಣುಮಕ್ಕಳನ್ನು ಕೂಡಿ ಹಾಕಿ ವಿದೇಶಕ್ಕೆ ರವಾನೆ ಮಾಡುತ್ತಿದ್ದ ಆರೋಪ..! ಸಲ್ಮಾ ಎಂಬ ಮಹಿಳೆಯೇ ಇದರ ಕಿಂಗ್‌ಪಿನ್

ರಾಜ್ಯದಲ್ಲಿ ಎಲೆಕ್ಷನ್ ಕಾವಿನ ನಡುವೆಯೂ ಹೆಣ್ಮಕ್ಕಳ ಕಳ್ಳಸಾಗಣೆ ಜಾಲ ರಾಜ್ಯದ ಜನತೆಯನ್ನು ಬೆಚ್ಚಿಬೀಳಿಸಿದೆ.‌ ವಿದೇಶಕ್ಕೆ ರವಾನೆಯಾಗುತ್ತಿದೆ ಎಂಬ ಗಂಭೀರ ಆರೋಪ ಕೇಳಿಬಂದಿದೆ.

ಶುಕ್ರವಾರ ರಾಷ್ಟ್ರೀಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ ಅಧ್ಯಕ್ಷ ಪ್ರಿಯಾಂಕ್ ಕಂಗೂನ್ ನೇತೃತ್ವದಲ್ಲಿ ಅನಾಥ ಆಶ್ರಮದ ಮೇಲೆ ನಡೆದ ದಾಳಿಯಲ್ಲಿ 20 ಬಾಲಕಿಯರನ್ನು ರಕ್ಷಣೆ ಮಾಡಲಾಗಿದೆ.

ಪತ್ತೆಯಾದವರನ್ನು ಗಲ್ಫ್​ ರಾಷ್ಟ್ರಗಳಿಗೆ ಸಾಗಿಸಲಾಗುತ್ತಿದೆ ಎಂಬ ಗಂಭೀರ ಆರೋಪ ಕೇಳಿಬಂದಿದೆ. ಎನ್​ಸಿಪಿಸಿಆರ್​ನಿಂದ ಪೊಲೀಸ್ ಠಾಣೆಗೆ ದೂರು ನೀಡಲಾಗಿದೆ.ಈ ಕುರಿತು ಎನ್​ಸಿಪಿಸಿಆರ್​ ದೂರು ಆಧರಿಸಿ ಸಂಪಿಗೆಹಳ್ಳಿ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿದೆ.

ಮದರಸದಲ್ಲಿ ಸುಮಾರು 10-20 ಮಕ್ಕಳು ಇದ್ದರು. ಮಕ್ಕಳಿಗೆ ಸರಿಯಾಗಿ ಶಿಕ್ಷಣವನ್ನು ನೀಡುತ್ತಿಲ್ಲ. ಜೊತೆಗೆ ಧಾರ್ಮಿಕ‌ ಶಿಕ್ಷಣವನ್ನು ನೀಡುತ್ತಿದ್ದಾರೆ. ಯಾವುದೇ ಲೈಸೆನ್ಸ್ ಇಲ್ಲದೆ ಮದರಸವನ್ನು ನಡೆಸುತ್ತಿದ್ದಾರೆ ಎಂದು ಆರೋಪಿಸಿ ದೂರು ನೀಡಲಾಗಿದೆ.

ಈ ಬಗ್ಗೆ ಎಕ್ಸ್​​ನಲ್ಲಿ ಬರೆದುಕೊಂಡಿರುವ ಪ್ರಿಯಾಂಕ ಕಂಗೂನ್​, ತನಿಖೆಯ ವೇಳೆ ಬಾಲಕಿಯರನ್ನು ಸಿಡಬ್ಲ್ಯುಸಿ ಮುಂದೆ ಹಾಜರುಪಡಿಸಲು ಮುಂದಾದಾಗ ಸಲ್ಮಾ ಎಂಬ ಮಹಿಳೆ ಮತ್ತು ಆಕೆಯ ಬಾಸ್ ಶಮೀರ್ ಗೂಂಡಾಗಳನ್ನು ಕರೆಸಿ ಜಗಳಕ್ಕೆ ಯತ್ನಿಸಿದ್ದಾರೆ. ಪೊಲೀಸರ ಮಧ್ಯಸ್ಥಿಕೆಯಲ್ಲಿ ಗೂಂಡಾಗಳನ್ನು ನಿಯಂತ್ರಿಸಲಾಗಿದೆ. ಪೊಲೀಸರ ಸಲಹೆ ಮೇರೆಗೆ ಮಹಿಳಾ ಅಧಿಕಾರಿಗಳ ಸುರಕ್ಷತೆಯನ್ನು ಗಮನದಲ್ಲಿಟ್ಟುಕೊಂಡು ಠಾಣೆಗೆ ಬರಲಾಗಿದೆ.

ದಾಳಿ ವೇಳೆ ಕೆಲ ಹುಡುಗಿಯರು ಮಾತನಾಡಿದ್ದು, ಸಲ್ಮಾ ಎಂಬ ಮಹಿಳೆ ಕುವೈತ್‌ನಲ್ಲಿರುವ ಹುಡುಗಿಯರ ಸಂಬಂಧಗಳನ್ನು ಏರ್ಪಡಿಸುತ್ತಾಳೆ ಎಂದು ಆರೋಪ ಮಾಡಿದ್ದಾರೆ. ಪ್ರಾಥಮಿಕ ಮಾಹಿತಿ ವರದಿಯಂತೆ ಗಲ್ಫ್ ದೇಶಗಳಲ್ಲಿ, ಮದುವೆಯ ಹೆಸರಿನಲ್ಲಿ ಕಳ್ಳಸಾಗಣೆಗಾಗಿ ಹುಡುಗಿಯರನ್ನು ಶೃಂಗಾರಗೊಳಿಸುವ ಕೆಲಸವನ್ನು ಇಲ್ಲಿ ಮಾಡಲಾಗುತ್ತದೆ ಎನ್ನಲಾಗಿದೆ.

Related Articles

Latest Articles