ಹುಣಸೂರು: ಕಾರು ಬೈಕ್ ನಡುವೆ ಅಪಘಾತ ಸಂಭವಿಸಿ ಬೈಕ್ ಸವಾರ ಮೃತಪಟ್ಟ ಘಟನೆ ನಡೆದಿದೆ. ಬೈಕ್ ನಲ್ಲಿದ್ದ ಬಾಲಕಿ ಗಂಭೀರ ಗಾಯಗೊಂಡಿದ್ದಾಳೆ. ಈ ಘಟನೆ ಹುಣಸೂರಿನ ಕೋರ್ಟ್ ಸರ್ಕಲ್ ನಲ್ಲಿ ಸಂಭವಿಸಿದೆ.
ಮೃತ ಯುವಕನನ್ನು ನಗರದ ಮಾರಿಗುಡಿ ಬೀದಿಯ ಮಂಜುನಾಥ್ (26) ಎನ್ನಲಾಗಿದ್ದು ಈತ ಎಚ್ ಡಿ ಎಫ್ ಸಿ ಬ್ಯಾಂಕ್ ನ ಉದ್ಯೋಗಿಯಾಗಿದ್ದ ಎನ್ನಲಾಗಿದೆ.
ಮಂಜುನಾಥ್ ತನ್ನ ತಂಗಿ ಮಗಳು ಪೂರ್ವಿಕಾಳೊಂದಿಗೆ ಬುಲೆಟ್ ಬೈಕಿನಲ್ಲಿ ಬೈಪಾಸ್ ರಸ್ತೆ ಕಡೆ ತೆರಳುತ್ತಿದ್ದ ವೇಳೆ ಮೈಸೂರು ಕಡೆಯಿಂದ ಮಡಿಕೇರಿ ಕಡೆಗೆ ತೆರಳುತ್ತಿದ್ದ ಕಾರೊಂದು ಕೋಟ್೯ ಸರ್ಕಲ್ ನಲ್ಲಿ ಡಿಕ್ಕಿ ಹೊಡೆದಿದೆ ಪರಿಣಾಮ ಮಂಜುನಾಥ್ ಹಾಗೂ ಪೂರ್ವಿಕಾ ಗಂಭೀರ ಗಾಯಗೊಂಡಿದ್ದರು, ಕೂಡಲೇ ಇಬ್ಬರನ್ನು ಸಾರ್ವಜನಿಕ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಿ ಹೆಚ್ಚಿನ ಚಿಕಿತ್ಸೆಗಾಗಿ ಮೈಸೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತಾದರೂ ಬುಧವಾರ ಮಧ್ಯರಾತ್ರಿ ಚಿಕಿತ್ಸೆ ಫಲಕಾರಿಯಾಗದೆ ಮಂಜುನಾಥ್ ಮೃತಪಟ್ಟಿದ್ದಾರೆ.
ಬಾಲಕಿಯ ಸ್ಥಿತಿ ಚಿಂತಾಜನಕವಾಗಿಯಿದ್ದು ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಘಟನೆ ಸಂಬಂಧ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.