Sunday, October 13, 2024

ಕ್ರಿಕೆಟ್ ಏಕದಿನ ವಿಶ್ವಕಪ್; ಸೆಮಿಫೈನಲ್ಸ್‌ಗೆ ಲಗ್ಗೆ ಇಟ್ಟ ಭಾರತ

ಐಸಿಸಿ ಏಕದಿನ ವಿಶ್ವಕಪ್ ಟೂರ್ನಿಯಲ್ಲಿ ಸತತ ಏಳನೇ ಗೆಲುವು ದಾಖಲಿಸಿರುವ ಟೀಮ್ ಇಂಡಿಯಾ ಸೆಮಿಫೈನಲ್‌ಗೆ ಪ್ರವೇಶಿಸಿ, ಸೆಮಿಫೈನಲ್‌ಗೆ ಪ್ರವೇಶಿಸಿದ ಮೊದಲ ತಂಡವೆಂಬ ಹೆಗ್ಗಳಿಕೆ ತನ್ನದಾಗಿಸಿದೆ.

ಮತ್ತೊಂದೆಡೆ ಈ ಸೋಲಿನೊಂದಿಗೆ ಲಂಕಾ ಸೆಮಿಫೈನಲ್ ಕನಸು ಬಹುತೇಕ ಭಗ್ನಗೊಂಡಿದೆ.

ಮುಂಬೈನ ವಾಂಖೆಡೆ ಮೈದಾನದಲ್ಲಿ ಗುರುವಾರ ನಡೆದ ಪಂದ್ಯದಲ್ಲಿ ಭಾರತ ತಂಡವು ಶ್ರೀಲಂಕಾ ವಿರುದ್ಧ 302 ರನ್ ಅಂತರದ ಭರ್ಜರಿ ಗೆಲುವು ದಾಖಲಿಸಿತು.

ಭಾರತ ಒಡ್ಡಿದ 358 ರನ್ ಗುರಿ ಬೆನ್ನಟ್ಟಿದ ಲಂಕಾ, 19.4 ಓವರ್‌ಗಳಲ್ಲೇ 55 ರನ್ನಿಗೆ ಆಲೌಟ್ ಆಯಿತು.

18 ರನ್ನಿಗೆ ಐದು ವಿಕೆಟ್ ಗಳಿಸಿದ ಮೊಹಮ್ಮದ್ ಶಮಿ ಅರ್ಹವಾಗಿಯೇ ಪಂದ್ಯಶ್ರೇಷ್ಠ ಪ್ರಶಸ್ತಿಗೆ ಭಾಜನರಾದರು. ಮೊಹಮ್ಮದ್ ಸಿರಾಜ್ ಮೂರು ಮತ್ತು ಜಸ್‌ಪ್ರೀತ್‌ ಬೂಮ್ರಾ ಒಂದು ವಿಕೆಟ್ ಗಳಿಸಿ ಮಿಂಚಿದರು.

ಈ ಮೊದಲು ಶುಭಮನ್ ಗಿಲ್ (92), ವಿರಾಟ್ ಕೊಹ್ಲಿ (88) ಹಾಗೂ ಶ್ರೇಯಸ್ ಅಯ್ಯರ್ (82) ಅಮೋಘ ಅರ್ಧಶತಕಗಳ ನೆರವಿನಿಂದ ಭಾರತ ತಂಡವು ಎಂಟು ವಿಕೆಟ್ ನಷ್ಟಕ್ಕೆ 357 ರನ್‌ಗಳ ಬೃಹತ್ ಮೊತ್ತ ಪೇರಿಸಿತು.

Related Articles

Latest Articles