Sunday, November 3, 2024

ಕೊಲಂಬೊಗೆ ಸಾಗುತ್ತಿದ್ದ ಬೃಹತ್ ಸರಕು ಹಡಗಿನಲ್ಲಿ ಬೆಂಕಿ; 40 ಗಂಟೆಗಳ ಕಾರ್ಯಚರಣೆ – ಸುರತ್ಕಲ್ ಬಳಿ ಲಂಗರು

ಉಡುಪಿ: ಅತ್ಯಂತ ದಹನಕಾರಿ ತೈಲ ಹಾಗೂ ಘನ ವಸ್ತುವನ್ನು ಒಯ್ಯುತ್ತಿದ್ದ ಬೃಹತ್ ಸರಕು ಹಡಗಿನಲ್ಲಿ ಬೆಂಕಿ ಕಾಣಿಸಿಕೊಂಡ ಘಟನೆ ನಡೆದಿದೆ. ಪ್ರಸ್ತುತ ಬೆಂಕಿಯನ್ನು ಸಂಪೂರ್ಣವಾಗಿ ನಂದಿಸಿದ್ದರೂ, ಅಪಾಯಕಾರಿ ಸ್ಥಿತಿಯಲ್ಲಿ ಈ ಹಡಗು ಸುರತ್ಕಲ್‌ನಿಂದ 33 ನಾಟಿಕಲ್ ಮೈಲು ದೂರದಲ್ಲಿ ಲಂಗರು ಹಾಕಿದೆ ಎಂದು ತಿಳಿದುಬಂದಿದೆ.

ಗುಜರಾತ್‌ನ ಮುಂದ್ರಾ ಬಂದರಿನಿಂದ ಶ್ರೀಲಂಕಾದ ಕೊಲಂಬೊಗೆ ಒಯ್ಯುತ್ತಿದ್ದ ಬೃಹತ್ ಸರಕು ಹಡಗಿನಲ್ಲಿ (ಕಾರ್ಗೋ ಕಂಟೈನರ್) ಗೋವಾ -ಕಾರವಾರ ನಡುವೆ ಅರಬಿ ಸಮುದ್ರದಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಸತತ ಪ್ರಯತ್ನದಿಂದ ಬೆಂಕಿಯನ್ನು ಸಂಪೂರ್ಣವಾಗಿ ನಂದಿಸಿದ್ದರೂ, ಅಪಾಯಕಾರಿ ಸ್ಥಿತಿಯಲ್ಲಿದ್ದ ಹಡಗನ್ನು ಕರ್ನಾಟಕದ ಕರಾವಳಿಯ ಸಮುದ್ರದಲ್ಲಿ ಲಂಗರು ಹಾಕಲಾಗಿದ್ದು ಭಯ ನಿರ್ಮಿಸಿದೆ.

ಸದ್ಯಕ್ಕೆ ಈ ಹಡಗು ಮಂಗಳೂರಿನ ಎನ್‌ಎಂಪಿಟಿಗೆ ಸಮೀಪದಲ್ಲಿರುವಂತೆ ಸುರತ್ಕಲ್ ಬಳಿ ನಡು ಸಮುದ್ರದಲ್ಲಿ ನಿಂತಿದೆ. ಸದ್ಯಕ್ಕೆ ಬೆಂಕಿಯನ್ನು ಸಂಪೂರ್ಣವಾಗಿ ನಂದಿಸಲಾಗಿದೆ. ಆದರೂ ಮತ್ತೊಮ್ಮೆ ಬೆಂಕಿ ಕಾಣಿಸಿಕೊಳ್ಳುವ, ಇದರಿಂದ ಹಡಗು ಸಂಪೂರ್ಣ ಹಾನಿಗೊಂಡು ಮುಳುಗುವ ಹಾಗೂ ಅದರಲ್ಲಿರುವ ತೈಲ ಸೋರಿಕೆಯಾಗಿ ಸಮುದ್ರ ಸೇರುವ ಅಪಾಯ ಇರುವುದರಿಂದ ಸಮುದ್ರ ಮಾಲಿನ್ಯವು ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯ ಸಮುದ್ರ ತೀರದಲ್ಲಿ ವ್ಯಾಪಿಸುವ ಅಪಾಯದ ಬಗ್ಗೆ ಎಚ್ಚರಿಕೆ ವಹಿಸುವಂತೆ ತಮಗೆ ಸೂಚನೆ ನೀಡಲಾಗಿದೆ ಎಂದು ಉಡುಪಿ ಜಿಲ್ಲಾಧಿಕಾರಿ ಡಾ.ಕೆ. ವಿದ್ಯಾಕುಮಾರಿ ಹಾಗೂ ಮಲ್ಪೆ ಕರಾವಳಿ ಕಾವಲು ಪಡೆಯ ಎಸ್ಪಿ ಮಿಥುನ್ ಎಚ್.ಎನ್ ತಿಳಿಸಿದ್ದಾರೆ.

ಪನಾಮಾ ದೇಶದ ಫ್ಲಾಗ್‌ನ್ನು ಹೊಂದಿರುವ ಎಂವಿ ಎಂ.ಫ್ರಾಂಕ್‌ಫರ್ಟ್ ಕಾರ್ಗೋ ಕಂಟೈನರ್ ಹಡಗು ತೈಲ ಹಾಗೂ ದಹನಕಾರಿ ವಸ್ತುಗಳನ್ನು ಹೇರಿಕೊಂಡು ಮುಂದ್ರಾ ಬಂದರಿನಿಂದ ಹೊರಟಿದ್ದು, ಗೋವಾದಿಂದ ಕಾರವಾರದತ್ತ ಬರುತ್ತಿದ್ದಾಗ ಜು.19ರಂದು ಅದರಲ್ಲಿ ಬೆಂಕಿ ಕಾಣಿಸಿಕೊಂಡಿತ್ತು.

ಹಿತಿ ಸಿಕ್ಕಿದ ತಕ್ಷಣವೇ ಇಂಡಿಯನ್ ಕೋಸ್ಟ್ ಗಾರ್ಡ್ (ಐಸಿಜಿ) ಹಡಗಿನ ಬೆಂಕಿಯನ್ನು ನಂದಿಸಲು ರಕ್ಷಣಾ ಹಡಗು ಹಾಗೂ ಹೆಲಿಕಾಪ್ಟರ್‌ಗಳನ್ನು ಬಳಸಿದ್ದು, ಅವು ಸತತ 40 ಗಂಟೆಗಳ ಕಾಲ ಹೋರಾಡಿ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದವು. ಈ ಹಡಗಿನಲ್ಲಿ ಒಟ್ಟು 21 ಮಂದಿ ಸಿಬ್ಬಂದಿಗಳಿದ್ದು, ಇವರಲ್ಲಿ ಒಬ್ಬ ದುರಂತದಲ್ಲಿ ಸಾವನ್ನಪ್ಪಿರುವ ಅಥವಾ ಕಣ್ಮರೆಯಾಗಿರುವ ಮಾಹಿತಿ ಇದೆ ಎಂದು ಮಿಥುನ್ ತಿಳಿಸಿದ್ದಾರೆ.

With input from Varthabharathi

ಸಂಪೂರ್ಣ ವರದಿ ಓದಿ: ಕ್ಲಿಕ್ ಮಾಡಿ

The merchant vessel Maersk Frankfurt reported explosions on its front deck on Friday, 12 kilometers south of Karwar, while sailing from India’s Gujarat state to Colombo in Sri Lanka. The vessel is currently positioned 17 miles from Karwar and continuous efforts are being made to control and extinguish the fire.

Related Articles

Latest Articles