ಉಗುರು ಹೊಂದಿದ್ದ ವರ್ತೂರು ಸಂತೋಷ್ ಬಂಧನದ ಬಳಿಕ ಹಲವು ಸೆಲೆಬ್ರಿಟಿಗಳ ಕತ್ತಿನಲ್ಲಿ ಹುಲಿ ಉಗುರಿನ ಲಾಕೆಟ್ ಇರುವ ಫೋಟೋ ವೈರಲ್ ಆಗಿತ್ತು. ನಟ ಹಾಗೂ ರಾಜ್ಯಸಭಾ ಸದಸ್ಯ ಜಗ್ಗೇಶ್ ಅವರು ಹುಲಿ ಉಗುರು ಹೊಂದಿರುವ ಪ್ರಕರಣದಲ್ಲಿ ಸಂಕಷ್ಟ ಎದುರಿಸುತ್ತಿದ್ದಾರೆ.
ಹುಲಿ ಉಗುರು ಹೊಂದಿರುವ ಲಾಕೆಟ್ ಜಗ್ಗೇಶ್ ಬಳಿಯು ಇದ್ದ ಕಾರಣ ಅರಣ್ಯ ಅಧಿಕಾರಿಗಳು ಅವರ ಮನೆಗೂ ಬಂದಿದ್ದಾರೆ. ಈ ವೇಳೆ ಜಗ್ಗೇಶ್ ಅವರು ಲಾಕೆಟ್ ಅನ್ನು ಅರಣ್ಯಾಧಿಕಾರಿಗಳಿಗೆ ನೀಡಿದ್ದಾರೆ.
‘ಕಾನೂನು ದೊಡ್ಡದು, ಅಧಿಕಾರಿಗಳು ಕೇಳಿದ ವಸ್ತು ಒಪ್ಪಿಸಲಾಗಿದೆ. ಅಮ್ಮ ನೀಡಿದ ಬಹಳ ಹಳೆಯ ಲಾಕೆಟ್ ಎಂದು ತಿಳಿಸಿರುವೆ. ಎಷ್ಟೋ ದೋಚುವ ಮನುಷ್ಯರು, ಕೊಲೆ ಪಾತಕರು, ದೇಶದ್ರೋಹಿಗಳು, ಸಮಾಜ ಘಾತುಕರಿಗಿಂತ ನನ್ನತಾಯಿ ಕಾಣಿಕೆ ಬಗ್ಗೆ ತಲೆಕೆಡಿಸಿಕೊಂಡ ದೇವರುಗಳಿಗೆ ಧನ್ಯವಾದ. ತಲೆತಗ್ಗಿಸುವ ಯಾವ ಕೆಲಸ ಮಾಡಿಲ್ಲ, ಮಾಡೋದೂ ಇಲ್ಲ, ಪಾಚ್ಕೊಳಿ’ ಎಂದು ಜಗ್ಗೇಶ್ ಎಕ್ಸ್‌ನಲ್ಲಿ ಬರೆದುಕೊಂಡಿದ್ದಾರೆ.
https://twitter.com/Jaggesh2/status/1717187686434517313?t=VUcsfqoZjWLTU4sdO4nHxg&s=19