ಭಾರತ ಕ್ರಿಕೆಟ್ ತಂಡ 9ನೇ ಆವೃತ್ತಿಯ ಟಿ20 ವಿಶ್ವಕಪ್ ಗೆದ್ದು ಇತಿಹಾಸ ನಿರ್ಮಿಸಿದೆ. ಕೊನೆಯವರೆಗೂ ರೋಚಕತೆಯಿಂದ ಕೂಡಿದ್ದ ಫೈನಲ್ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾವನ್ನು ಮಣಿಸಿದ ರೋಹಿತ್ ಪಡೆ ದಾಖಲೆಯ ಎರಡನೇ ಬಾರಿಗೆ ಟಿ20 ವಿಶ್ವಕಪ್ ಎತ್ತಿಹಿಡಿದಿದೆ.
ಈ ಚಾಂಪಿಯನ್ ಪ್ರದರ್ಶನಕ್ಕೆ ಟೀಂ ಇಂಡಿಯಾ ಐಸಿಸಿಯಿಂದ ಒಟ್ಟಾರೆಯಾಗಿ ಬರೋಬ್ಬರಿ 22.76 ಕೋಟಿ ರೂಗಳನ್ನು ಬಹುಮಾನದ ರೂಪದಲ್ಲಿ ಪಡೆದುಕೊಂಡಿತ್ತು.
ಇದೀಗ ವಿಶ್ವ ಕ್ರಿಕೆಟ್ನ ಬಿಗ್ ಬಾಸ್ ಎನಿಸಿಕೊಳ್ಳುವ ಬಿಸಿಸಿಐ ತನ್ನ ಚಾಂಪಿಯನ್ ತಂಡಕ್ಕೆ ಭಾರಿ ಗಾತ್ರದ ಬಹುಮಾನ ಘೋಷಿಸಿ, ಇಡೀ ವಿಶ್ವವೇ ನಿಬ್ಬೆರಗಾಗುವಂತೆ ಮಾಡಿದೆ. ಒಂದಲ್ಲ, ಎರಡಲ್ಲ ಬಿಸಿಸಿಐ ಬರೋಬ್ಬರಿ 125 ಕೋಟಿ ರೂಗಳನ್ನು ಬಹುಮಾನವಾಗಿ ಘೋಷಿಸಿದೆ.