ಮಂಗಳೂರು: ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ದ.ಕ. ಜಿಲ್ಲೆ ಮಂಗಳೂರು ಕಚೇರಿಯಲ್ಲಿ ಪರಿಶಿಷ್ಟ ಜಾತಿಗೆ ಸೇರಿದ ಪತ್ರಿಕೋದ್ಯಮ ಪದವೀಧರ / ಸ್ನಾತಕೋತ್ತರ ಪದವೀಧರರಿಗೆ 12 ತಿಂಗಳ ಅವಧಿಯ ಅಪ್ರಂಟಿಸ್ ತರಬೇತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ.
ಮಾನ್ಯತೆ ಪಡೆದ ವಿ.ವಿ.ಯಿಂದ ಪತ್ರಿಕೋದ್ಯಮ ಪದವಿ ಅಥವಾ ಸ್ನಾತಕೋತ್ತರ ಪದವಿ ಪೂರ್ಣ ಗೊಳಿಸಿರುವ ಹಾಗೂ ಕಂಪ್ಯೂಟರ್ ಜ್ಞಾನವಿರುವ ಕನ್ನಡ ಭಾಷೆ ಬಳಸಲು ಪ್ರಬುದ್ಧತೆ ಇರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.
ತರಬೇತಿ ಅವಧಿಯಲ್ಲಿ ತಿಂಗಳಿಗೆ 15 ಸಾವಿರ ರೂ. ಸ್ಟೈಫಂಡ್ ನೀಡಲಾಗುವುದು. ಅರ್ಜಿ ಸಲ್ಲಿಸಲು ಡಿ. 1 ಕೊನೆಯ ದಿನ.
ಅರ್ಜಿ ಹಾಗೂ ಹೆಚ್ಚಿನ ಮಾಹಿತಿಗೆ ಹಿರಿಯ ಸಹಾಯಕ ನಿರ್ದೇಶಕರು, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, 2ನೇ ಮಹಡಿ, ಪಿಡಬ್ಲ್ಯೂಡಿ ಕಟ್ಟಡ, ನೆಹರೂ ಮೈದಾನದ ಎದುರು, ಮಂಗಳೂರು ಇಲ್ಲಿ ಸಂಪರ್ಕಿಸಬಹುದು.