ಕಡಬ: ನಡೆದುಕೊಂಡು ಹೋಗುತ್ತಿದ್ದ ವ್ಯಕ್ತಿಗೆ ಕಾಡಾನೆ ದಾಳಿ ನಡೆಸಿದ ಪರಿಣಾಮ ಗಂಭೀರ ಗಾಯಗೊಂಡ ಘಟನೆ ಕಡಬ ತಾಲೂಕಿನ ಐತೂರು ಗ್ರಾಮದಲ್ಲಿ ಗುರುವಾರದಂದು ರಾತ್ರಿ ಸಂಭವಿಸಿದೆ.
ಕಾಡಾನೆ ತುಳಿತಕ್ಕೊಳಗಾದವರನ್ನು ನೇಲ್ಯಡ್ಕ ನಿವಾಸಿ ಚೋಮ ಮುಗೇತ (52) ಎಂದು ಗುರುತಿಸಲಾಗಿದೆ. ಇವರು ರಸ್ತೆ ಬದಿಯಲ್ಲಿ ನಡೆದುಕೊಂಡು ಹೋಗುತ್ತಿದ್ದ ವೇಳೆ ಸುಳ್ಯ ಸಮೀಪ ಏಕಾಏಕಿ ಪ್ರತ್ಯಕ್ಷಗೊಂಡ ಕಾಡಾನೆ ದಾಳಿ ನಡೆಸಿದೆ.
ಪರಿಣಾಮ ಗಂಭೀರ ಗಾಯಗೊಂಡ ಚೋಮರವರನ್ನು ಕಡಬ ಸಮುದಾಯ ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಿ ಹೆಚ್ಚಿನ ಚಿಕಿತ್ಸೆಗಾಗಿ ಪುತ್ತೂರಿನ ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಇದೊಂದು ಬ್ರೇಕಿಂಗ್ ನ್ಯೂಸ್ ಆಗಿದ್ದು ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.