ಕಡಬ; ಮೂತ್ರ ವಿಸರ್ಜನೆಗೆ ತೆರಳಿದ್ದ 7 ವರ್ಷದ ಬಾಲಕಿ ಮೇಲೆ ಅತ್ಯಾಚಾರ ಎಸಗಿದ ಅಮಾನವೀಯ ಕೃತ್ಯ ಕಡಬ ತಾಲೂಕಿನ ಕಾಣಿಯೂರಿನಲ್ಲಿ ನಡೆದಿದೆ.
ಈ ಬಗ್ಗೆ ಬೆಳ್ಳಾರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗುತ್ತಿದ್ದಂತೆ ವಿಜಯನಗರ ಜಿಲ್ಲೆಯ ಕೂಡ್ಲಿಗಿ ತಾಲೂಕಿನ ನಾಗೇಶ(24) ಎಂಬಾತನನ್ನು ಬಂಧಿಸಿದ್ದಾರೆ.
ಮಹಾರಾಷ್ಟ್ರದ ಕೂಲಿ ಕಾರ್ಮಿರರೋರ್ವರ ಏಳು ವರ್ಷದ ಮಗಳು ಮೂತ್ರ ವಿಸರ್ಜನೆಗೆ ತೆರಳಿದ್ದ ವೇಳೆ ಬಲವಂತವಾಗಿ ಅತ್ಯಾಚಾರ ನಡೆಸಿದ್ದಾನೆ ಎನ್ನಲಾಗಿದೆ.
ಅತ್ಯಾಚಾರದ ಬಳಿಕ ಬಾಲಕಿಗೆ ರಕ್ತಸ್ರಾವವಾಗಿ ಆಕೆ ತೀವ್ರವಾಗಿ ಅಸ್ವಸ್ಥಗೊಂಡಿದ್ದಾಳೆ. ಈ ವೇಳೆ ಪ್ರಕರಣ ಬಯಲಾಗಿದೆ. ಈ ಬಗ್ಗೆ ಬೆಳ್ಳಾರೆ ಠಾಣೆಯಲ್ಲಿ ಬಾಲಕಿಯ ಪೋಷಕರು ದೂರು ನೀಡಿದ್ದಾರೆ. ಅದರಂತೆ ಆರೋಪಿಯನ್ನು ಬಂಧಿಸಲಾಗಿದೆ.