ದಕ್ಷಿಣ ಕನ್ನಡ: ನಿವೃತ್ತ ರೈಲ್ವೆ ಉದ್ಯೋಗಿಯೊಬ್ಬರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಕಡಬದ ಕೋಡಿಂಬಾಳ ಎಂಬಲ್ಲಿ ನಡೆದಿದೆ.
ಮೃತರನ್ನು ಮೃತರನ್ನು ಕೋಡಿಂಬಾಳ ಗ್ರಾಮದ ಗುಂಡಿಮಜಲು ನಿವಾಸಿ ಮಾಧವ ರೈ(62) ಎಂದು ಗುರುತಿಸಲಾಗಿದೆ. ಅವರ ಮೃತದೇಹ ಕೋಡಿಂಬಾಳದ ರೈಲು ಮಾರ್ಗದ ಸಮೀಪ ಗೇರು ಮರಕ್ಕೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಸ್ಥಿತಿಯಲ್ಲಿ ಜ. 16ರ ರಾತ್ರಿ ಪತ್ತೆಯಾಗಿದೆ.
ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಈ ಬಗ್ಗೆ ಕಡಬ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮೃತರು ಪತ್ನಿ ಹಾಗೂ 6 ಮಂದಿ ಮಕ್ಕಳನ್ನು ಅಗಲಿದ್ದಾರೆ.