ಕಡಬ: ಯುವಕನೋರ್ವ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಜು. 20ರ ರಾತ್ರಿ ಕಡಬದಲ್ಲಿ ನಡೆದಿದೆ.
ಆತ್ಮಹತ್ಯೆ ಮಾಡಿಕೊಂಡ ಯುವಕನನ್ನು ಕಡಬ ತಿಮರಡ್ಡ ನಿವಾಸಿ ಅಝರ್(28) ಎಂದು ಗುರುತಿಸಲಾಗಿದೆ.
ಈತ ಶನಿವಾರ ರಾತ್ರಿ ತನ್ನ ಮನೆಯ ಕೋಣೆಯಲ್ಲಿ ಸೀರೆಯಿಂದ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ವರದಿಯಾಗಿದೆ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ.