Tuesday, March 18, 2025

ಕಾರ್ಕಳ: ಈಜುಲು ಹೋದ ಕಾಲೇಜು ವಿದ್ಯಾರ್ಥಿ ನೀರುಪಾಲು

ಕಾರ್ಕಳ: ಈಜಲೆಂದು ದುರ್ಗಾ ಫಾಲ್ಸ್‌ಗೆ ಹೋದ ವಿದ್ಯಾರ್ಥಿಯೋರ್ವ ದಾರುಣವಾಗಿ ಅಂತ್ಯ ಕಂಡಿದ್ದಾನೆ. ನ. 28 ರ ಮಧ್ಯಾಹ್ನ ಘಟನೆ ಸಂಭವಿಸಿದೆ.

ಮೃತ ವಿದ್ಯಾರ್ಥಿಯನ್ನು ಜಾಯಲ್ ಡಯಾಸ್ (19) ಎಂದು ಗುರುತಿಸಲಾಗಿದೆ. ಈತ ಉಡುಪಿಯ ಖಾಸಗಿ ಕಾಲೇಜಿನಲ್ಲಿ ದ್ವಿತೀಯ ವರ್ಷದ ಬಿ.ಕಾಂ. ಪದವಿ ವ್ಯಾಸಂಗ ಮಾಡುತ್ತಿದ್ದಾನೆ ಎಂದು ತಿಳಿದುಬಂದಿದೆ.

7 ಮಂದಿ ವಿದ್ಯಾರ್ಥಿಗಳ ತಂಡ ದುರ್ಗಾ ಫಾಲ್ಸ್‌ ಗೆ ಬಂದಿದ್ದು, ನೀರಿನಲ್ಲಿ ಆಟವಾಡುತ್ತಿದ್ದ ಸಂದರ್ಭ ಜಾಯಲ್ ಡಯಾಸ್ ಆಯ ತಪ್ಪಿ ನೀರು ಪಾಲಾಗಿದ್ದಾನೆ ಎಂದು ತಿಳಿದುಬಂದಿದೆ. ಕಾರ್ಕಳ ಗ್ರಾಮಾಂತರ ಠಾಣಾ ಪೊಲೀಸರು ಘಟನಾ ಸ್ಥಳಕ್ಕೆ ಭೇಟಿ ನೀಡಿದ್ದು, ಪರಿಶೀಲನೆ ನಡೆಸುತ್ತಿದ್ದಾರೆ.

Related Articles

Latest Articles