ರಾಜ್ಯ ಪಠ್ಯಕ್ರಮದ ಸರಕಾರಿ, ಅನುದಾನಿತ, ಅನುದಾನ ರಹಿತ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ 5, 8 ಮತ್ತು 9ನೇ ತರಗತಿಗಳ ವಿದ್ಯಾರ್ಥಿಗಳಿಗೆ 2023-24ನೇ ಸಾಲಿನ ಸಂಕಲನಾತ್ಮಕ ಮೌಲ್ಯಮಾಪನ-2 (SA-2) ಮೌಲ್ಯಾಂಕನ ಪರೀಕ್ಷೆ ವೇಳಾಪಟ್ಟಿಯಂತೆ ನಡೆಯಲಿದೆ.
ಮೌಲ್ಯಾಂಕನ ಪರೀಕ್ಷೆ ನಡೆಸುವ ಸಂಬಂಧ ಉಚ್ಚ ನ್ಯಾಯಾಲಯಲ್ಲಿ ದಾಖಲಾಗಿದ್ದ ಪ್ರಕರಣಕ್ಕೆ ಸಂಬಂದಿಸಿದಂತೆ ಸರಕಾರದ ಅಧಿಸೂಚನೆಗಳನ್ನು ಏಕ ಸದಸ್ಯ ಪೀಠದಲ್ಲಿ ರದ್ದು ಮಾಡಲಾಗಿತ್ತು.
ಆದರೆ ತೀರ್ಪಿನ ವಿರುದ್ಧ ಸರಕಾರ ಮಾ.7ರಂದು ಉಚ್ಚನ್ಯಾಯಾಲಯದಲ್ಲಿ ಮೇಲ್ಮನವಿ ಸಲ್ಲಿಸಿದ್ದು, ನ್ಯಾಯಾಲಯದ ದ್ವಿಸದಸ್ಯ ಪೀಠವು ಪ್ರಕರಣವನ್ನು ಆಲಿಸಿ ಸದರಿ 5, 8 ಮತ್ತು 9ನೇ ತರಗತಿಗಳ ವಿದ್ಯಾರ್ಥಿಗಳಿಗೆ ಸಂಕಲನಾತ್ಮಕ ಮೌಲ್ಯಮಾಪನ-2 (SA-2) ಮೌಲ್ಯಂಕನ ಕಾರ್ಯವನ್ನು ಮುಂದುವರೆಸಲು ಮಧ್ಯಂತರ ತೀರ್ಪು ನೀಡಿದೆ.
ಅದರಂತೆ ಈಗಾಗಲೇ ನಿಗಧಿಯಾಗಿರುವ ವೇಳಾಪಟ್ಟಿಯಂತೆ ಮೌಲ್ಯಾಂಕನ ಕಾರ್ಯವು ಯಥಾವತ್ತಾಗಿ ಮುಂದುವರೆಯುತ್ತದೆ ಎಂದು ಶಾಲಾ ಶಿಕ್ಷಣ ಇಲಾಖೆಯು ಪ್ರಕಟಣೆಯಲ್ಲಿ ತಿಳಿಸಿದೆ.