ಬೆಂಗಳೂರು: ಪತ್ನಿ ಅನ್ಯಧರ್ಮಕ್ಕೆ ಮತಾಂತರಗೊಂಡಲ್ಲಿ ಪತಿಯಿಂದ ಎಲ್ಲ ಹಕ್ಕು ಕಳೆದುಕೊಂಡಂತೆ ಎಂದು ಹೈಕೋರ್ಟ್ ಅಭಿಪ್ರಾಯಪಟ್ಟಿದೆ.
ನ್ಯಾಯಮೂರ್ತಿ ರಾಜೇಂದ್ರ ಬಾದಾಮಿಕರ್ ಅವರಿದ್ದ ನ್ಯಾಯಪೀಠ ಈ ಅಭಿಪ್ರಾಯಪಟ್ಟಿದೆ. ಅಲ್ಲದೇ, ಪರಿಹಾರ ನೀಡುವಂತೆ ಆದೇಶಿಸಿದ್ದ ಸೆಷನ್ಸ್ ನ್ಯಾಯಾಲಯದ ಆದೇಶವನ್ನು ರದ್ದು ಮಾಡಿದೆ.
ಪ್ರಕರಣದಲ್ಲಿ ದಂಪತಿ ನಡುವೆ ವಿಚ್ಛೇದನವಾಗಿಲ್ಲದಿದ್ದರೂ, ಪತ್ನಿ ಕ್ರಿಶ್ಚಿಯನ್ ಧರ್ಮಕ್ಕೆ ಮತಾಂತರಗೊಂಡಿರುವುದರಿಂದ ಇಬ್ಬರ ನಡುವಿನ ವಿವಾಹದ ಹಕ್ಕುಗಳು ರದ್ದುಗೊಂಡಂತಾಗಿದೆ.
ಜೊತೆಗೆ, ಕೌಟುಂಬಿಕ ದೌರ್ಜನ್ಯ ನಡೆದಿಲ್ಲ ಎಂಬುದಾಗಿ ಕೌಟುಂಬಿಕ ಹಾಗೂ ಸೆಷನ್ಸ್ ನ್ಯಾಯಾಲಯ ನೀಡಿರುವ ಆದೇಶವನ್ನು ಪ್ರಶ್ನಿಸಿಲ್ಲ ಎಂದು ಕೋರ್ಟ್ ಆದೇಶದಲ್ಲಿ ತಿಳಿಸಿದೆ.