ನ್ಯಾಯಮೂರ್ತಿ ಪಿ ಎಸ್ ದಿನೇಶ್ ಕುಮಾರ್ ಅವರು ಕರ್ನಾಟಕ ಹೈಕೋರ್ಟ್‌ನ ಮುಖ್ಯ ನ್ಯಾಯಮೂರ್ತಿಯಾಗಿ ಬುಧವಾರ ನೇಮಕಗೊಂಡಿದ್ದಾರೆ.
ಕರ್ನಾಟಕ ಹೈಕೋರ್ಟ್ ನ ಮುಖ್ಯ ನ್ಯಾಯಮೂರ್ತಿಯಾಗಿದ್ದ ನ್ಯಾಯಮೂರ್ತಿ ಪಿ ಬಿ ವರಾಳೆ ಅವರು ಕೆಲವು ದಿನಗಳ ಹಿಂದೆ ಸುಪ್ರೀಂ ಕೋರ್ಟ್‌ನ ನ್ಯಾಯಾಧೀಶರಾಗಿ ಬಡ್ತಿ ಪಡೆದ ನಂತರ ತೆರವಾಗಿದ್ದ ಸ್ಥಾನಕ್ಕೆ ಇದೀಗ ನ್ಯಾ. ಪಿ ಎಸ್ ದಿನೇಶ್ ಕುಮಾರ್ ನೇಮಕ ಮಾಡಲಾಗಿದೆ.
ಅವರು ಫೆಬ್ರವರಿ 24 ರಂದು ನಿವೃತ್ತರಾಗುತ್ತಿದ್ದು, ಹೀಗಾಗಿ ಅವರು ಒಂದು ತಿಂಗಳಿಗಿಂತ ಕಡಿಮೆ ಅವಧಿಯಲ್ಲಿ ಕರ್ನಾಟಕ ಮುಖ್ಯನ್ಯಾಯಮೂರ್ತಿಯಾಗಿ ಸೇವೆ ಸಲ್ಲಿಸಲಿದ್ದಾರೆ.