Tuesday, April 22, 2025

ಈರುಳ್ಳಿ ಬೆಲೆ ಮತ್ತೆ ಏರಿಕೆ: ದಸರಾ ವೇಳೆಗೆ ದುಬಾರಿಯಾಗಲಿದೆ ಬೆಲೆ

ದಿನದಿಂದ ದಿನಕ್ಕೆ ಸಾಮಾನ್ಯ ಜನರ ಬದುಕು ದುಬಾರಿಯಾಗುತ್ತಿದೆ. ಅಗತ್ಯ ವಸ್ತುಗಳ‌ ಬೆಲೆ‌ ಏರಿಕೆಯಿಂದ ಬಡವರು ಮಧ್ಯಮ ವರ್ಗದವರು ಜೀವನ ನಡೆಸುವುದೇ ಕಷ್ಟವಾಗಿದೆ.‌ ಈ ಮಧ್ಯೆ ಈರುಳ್ಳಿ ಬೆಲೆ ಏರಿಕೆಯಾಗಿದ್ದು, ಗ್ರಾಹಕರಿಗೆ ಕಣ್ಣೀರು ತರಿಸುತ್ತಿದೆ.

ಸದ್ಯ ಕರ್ನಾಟಕದ ಹಲವೆಡೆ ಅತಿಯಾದ ಮಳೆಯ ಕಾರಣ ಬೆಳೆ ನೀರು‌ಪಾಲಗುತ್ತಿದ್ದರೆ, ಮತ್ತೊಂದೆಡೆ ಈರುಳ್ಳಿ ಮಳೆಯಿಂದಾಗಿ ಇಟ್ಟಲ್ಲೇ ಕೊಳೆತು ಹೋಗುತ್ತಿದೆ. ಹೀಗಾಗಿ ಹಬ್ಬದ ವಾರದಲ್ಲಿ 50 ರೂ. ಇದ್ದ ಈರುಳ್ಳಿಯ ಬೆಲೆ ಇದೀಗ 60 ರಿಂದ 70 ರೂಪಾಯಿ ಆಗಿದೆ.

ರಾಜ್ಯದಲ್ಲಿ ಹೆಚ್ಚು ಮಳೆಯಾಗುತ್ತಿರುವ ಪರಿಣಾಮ ಈರುಳ್ಳಿಯ ಉತ್ಪಾದನೆಯಲ್ಲಿ ಭಾರಿ ಕುಸಿತವಾಗಿದೆ. ಹೀಗಾಗಿ ಮಾರುಕಟ್ಟೆಗೆ ಹೆಚ್ಚಿನ ಪ್ರಮಾಣದಲ್ಲಿ ಈರುಳ್ಳಿ ಬರುತ್ತಿಲ್ಲ.‌ ಪರಿಣಾಮವಾಗಿ ಪೂರೈಕೆ ಕೂಡ ಕಡಿಮೆಯಾಗಿದೆ. ಸದ್ಯ ರಾಜ್ಯಕ್ಕೆ ಪುಣೆ, ಮಹಾರಾಷ್ಟ್ರದಿಂದ ಈರುಳ್ಳಿ ತರಿಸಿಕೊಳ್ಳಲಾಗುತ್ತಿದೆ.

ದಸರಾ ವೇಳೆಗೆ ಈರುಳ್ಳಿಯ ಬೆಲೆ ಮತ್ತಷ್ಟು ದುಬಾರಿಯಾಗುವ ಸಾಧ್ಯತೆ ಇದೆ. ಈ ಹಿಂದೆ ಉತ್ತರ ಕರ್ನಾಟಕ ಭಾಗದಿಂದ ಈರುಳ್ಳಿ ರಾಜ್ಯಕ್ಕೆ ಪೂರೈಕೆಯಾಗುತ್ತಿತ್ತು. ಆದರೆ, ಈಗ ಉತ್ತರ ಕರ್ನಾಟಕದಲ್ಲಿ ಹೆಚ್ಚು ಮಳೆಯಾಗುತ್ತಿದ್ದು, ಮಳೆಗೆ ಈರುಳ್ಳಿ ಕೊಳೆತು ಹೋಗುತ್ತಿದೆ. ಹೀಗಾಗಿ ಈರುಳ್ಳಿ ಪೂರೈಕೆ ಕಡಿಮೆಯಾಗಿದೆ.

Related Articles

Latest Articles