ರಾಜ್ಯ ಸರ್ಕಾರದಿಂದ ಆಡಳಿತ ಯಂತ್ರಕ್ಕೆ ಮತ್ತೊಂಉ ಮೇಜರ್ ಸರ್ಜರಿ ನಡೆದಿದೆ. ಈ ಬಾರಿ 71 ಪೊಲೀಸ್ ಇನ್ಸ್ ಪೆಕ್ಟರ್ ಗಳ ವರ್ಗಾವಣೆಗೊಳಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
ಈ ಬಗ್ಗೆ ಐಪಿಎಸ್ ಅಧಿಕಾರಿ ಸೌಮೇಂದು ಮುಖರ್ಜಿ ಆದೇಶ ಹೊರಡಿಸಿದ್ದಾರೆ. ಪೊಲೀಸ್ ಸಿಬ್ಬಂದಿ ಮಂಡಳಿಯ ಸಭೆಯ ನಿರ್ಣಯದಂತೆ ಈ ಕೆಳಕಂಡ ಪೊಲೀಸ್ ಇನ್ಸ್ಪೆಕ್ಟರ್ (ಸಿವಿಲ್) ರವರುಗಳನ್ನು ಆಡಳಿತಾತ್ಮಕ ಕಾರಣಗಳಿಗಾಗಿ ತಕ್ಷಣದಿಂದ ಜಾರಿಗೆ ಬರುವಂತೆ ಅವರುಗಳ ಹೆಸರಿನ ಮುಂದೆ ಸೂಚಿಸಿರುವ ಸ್ಥಳಕ್ಕೆ ವರ್ಗಾವಣೆ ಮಾಡಿ ಆದೇಶಿಸಲಾಗಿದೆ ಎಂದು ಸುತ್ತೋಲೆ ಹೊರಡಿಸಿದ್ದಾರೆ.
ಯಾವುದೇ ಸೇರುವಿಕೆ ಕಾಲವನ್ನು ಉಪಯೋಗಿಸಿಕೊಳ್ಳದೆ ವರ್ಗಾಯಿಸಲಾದ ಸ್ಥಳದ ಕರ್ತವ್ಯಕ್ಕೆ ವರದಿ ಮಾಡಿಕೊಳ್ಳುವಂತೆ ಸೂಚಿಸುವುದು ಹಾಗೂ ಬಿಡುಗಡೆಗೊಂಡ ಮತ್ತು ವರದಿ ಮಾಡಿದ ಬಗ್ಗೆ ಈ ಕಛೇರಿಗೆ ಪಾಲನಾ ವರದಿ ಸಲ್ಲಿಸುವುದು.ಮೇಲ್ಕಂಡ ವರ್ಗಾವಣೆ ಆದೇಶದಲ್ಲಿ ಸ್ಥಳ ನಿಯುಕ್ತಿಗೊಳಿಸದೆ ಇರುವ ಪಿ.ಐ.(ಸಿವಿಲ್) ವೃಂದದ ಅಧಿಕಾರಿಗಳು ಮುಂದಿನ ಸ್ಥಳ ನಿಯುಕ್ತಿಗಾಗಿ ಪೊಲೀಸ್ ಪ್ರಧಾನ ಕಛೇರಿಯಲ್ಲಿ ವರದಿ ಮಾಡಿಕೊಳ್ಳುವುದು ಎಂದು ಸೂಚನೆ ನೀಡಿದ್ದಾರೆ.
ವರ್ಗಾವಣೆಗೊಂಡ ಪೊಲೀಸ್ ಅಧಿಕಾರಿಗಳ ಪಟ್ಟಿ