ಪ್ರಧಾನಿ ನರೇಂದ್ರ ಮೋದಿ ಮೂರನೇ ಬಾರಿ ಪ್ರಧಾನಿಯಾಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಈಗಗಾಲೇ ಎನ್‌ಡಿಎಯ ಹಲವು ಮಂದಿ ಸಚಿವ ಸಂಪುಟದ ಸಚಿವರಾಗಿ ಆಯ್ಕೆಯಾಗಿದ್ದು ಕರ್ನಾಟಕದ ನಾಲ್ವರು ಸದಸ್ಯರು ಪ್ರಮಾಣವಚನ ಸ್ವೀಕರಿಸಿದ್ದಾರೆ.
ಕೇಂದ್ರ ಸಚಿವರಾಗಿ ಹೆಚ್‌ಡಿ ಕುಮಾರಸ್ವಾಮಿ, ಪ್ರಹ್ಲಾದ್ ಜೋಶಿ, ವಿ ಸೋಮಣ್ಣ ಹಾಗೂ ಶೋಭಾ ಕರಂದ್ಲಾಜೆ ಪ್ರಮಾಣವಚನ ಸ್ವೀಕರಿಸಿದ್ದಾರೆ. ಮೊದಲಿಗೆ ದೇವರ ಹೆಸರಲ್ಲಿ ಹೆಚ್‌ಡಿಕೆ ಕೇಂದ್ರ ಸಂಪುಟ ದರ್ಜೆ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದರು.
ಪ್ರಹ್ಲಾದ್ ಜೋಶಿ ಹಾಗೂ ಶೋಭಾ ಕರಂದ್ಲಾಜೆ ಅವರು ಎರಡನೇ ಬಾರಿಗೆ ಮೋದಿ ಸಂಪುಟ ಸಚಿವರಾಗಿದ್ದಾರೆ. ಜೊತೆಗೆ ವಿ ಸೋಮಣ್ಣ ಅವರು ಕೂಡ ಕೇಂದ್ರ ಸಚಿವರಾಗಿ ಪ್ರಮಾಣವಚನ ಸ್ವೀಕಾರ ಮಾಡಿದರು. ಇನ್ನು ಇವರಿಗೆ ಯಾವೆಲ್ಲಾ ಖಾತೆ ನೀಡುತ್ತಾರೆ ಅನ್ನೋದನ್ನ ಕಾದುನೋಡಬೇಕಾಗಿದೆ.