ಕಾಸರಗೋಡು: ಸ್ಕೂಟರ್ ನಿಯಂತ್ರಣ ತಪ್ಪಿ ಹಳ್ಳಕ್ಕೆ ಬಿದ್ದು 19 ವರ್ಷದ ಯುವಕ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾನೆ. ಕಾಸರಗೋಡು ಅರಮಂಗಾನಂ ರಸ್ತೆಯ ಅಬ್ದುಲ್ ರಝಾಕ್ ಎಂಬವರ ಪುತ್ರ ಅಹ್ಮದ್ ರಂಝಾನ್ (19) ಮೃತರು.
ಆ. 12ರ ಮುಂಜಾನೆ 5 ಗಂಟೆಗೆ ಚಟ್ಟಂಚಾಲ್- ದೇಳಿ ರಸ್ತೆಯ ಶಿವಪುರ ಜಂಕ್ಷನ್‌ನಲ್ಲಿ ಅಪಘಾತ ಸಂಭವಿಸಿತ್ತು. ಕೆಲಸ ಮುಗಿಸಿ ಮನೆಗೆ ಹಿಂದಿರುಗುತ್ತಿದ್ದ ವೇಳೆ ಸ್ಕೂಟರ್ ನಿಯಂತ್ರಣ ತಪ್ಪಿ ಹಳ್ಳಕ್ಕೆ ಬಿದ್ದಿದ್ದಾಗಿ ವರದಿಯಾಗಿದೆ.
ಬೆಳಗಿನ ನಡಿಗೆಗೆಂದು ಹೊರಟಿದ್ದ ವ್ಯಕ್ತಿಯೊಬ್ಬರು ಘಟನೆಯನ್ನು ಕಂಡು ಸ್ಥಳೀಯ ನಿವಾಸಿಗಳೊಂದಿಗೆ ಆಸ್ಪತ್ರೆಗೆ ದಾಖಲಿಸಿದ್ದರು. ಆದರೆ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾನೆ.
ಮೇಲ್ಪರಂ ಪೊಲೀಸ್ ಇನ್ಸ್‌ಪೆಕ್ಟರ್ ಸಂತೋಷ್ ಮತ್ತು ಅವರ ತಂಡವು ಸ್ಥಳಕ್ಕೆ ಧಾವಿಸಿ ತನಿಖೆ ಆರಂಭಿಸಿದೆ.