Wednesday, February 19, 2025

ಕರ್ನಾಟಕಕ್ಕೆ ಸಿಕ್ಕ ನಿಜವಾದ ಸಮ್ಮಾನ: ಶ್ರೀರಾಮ, ಮೋದಿಯನ್ನು ಕೊಂಡಾಡಿದ ನಟ ಕಿಚ್ಚ ಸುದೀಪ

ಅಯೋಧ್ಯೆಯ ರಾಮಮಂದಿರ ಮತ್ತು ಕರ್ನಾಟಕಕ್ಕೆ ದೊರಕಿರುವ ಅವಕಾಶ ಕುರಿತು ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್‌ ಹಂಚಿಕೊಂಡಿರುವ ನಟ ಕಿಚ್ಚ ಸುದೀಪ್‌ ಅವರು ಪ್ರಧಾನಿ ನರೇಂದ್ರ ಮೋದಿಗೆ ಧನ್ಯವಾದ ಹೇಳಿದ್ದಾರೆ.

ಮೈಸೂರಿನ ಅರುಣ್‌ ಯೋಗಿರಾಜ್‌ ಅವರಿಗೆ ಬಾಲರಾಮನ ಮೂರ್ತಿ ಕೆತ್ತಲು ದೊರಕಿರುವ ಅವಕಾಶ ಸೇರಿದಂತೆ ಹಲವು ವಿಚಾರಗಳನ್ನು ಕಿಚ್ಚ ಸುದೀಪ ‘ಎಕ್ಸ್‌’ನಲ್ಲಿ ಪ್ರಸ್ತಾಪಿಸಿದ್ದಾರೆ.

‘ರಾಮ ಜಯ ರಾಮ, ಆದಿ ಗುರು ಮಹರ್ಷಿ ಶ್ರೀ ವಾಲ್ಮೀಕಿ ಮೊದಲು ನಿಮ್ಮ ಕಥೆ ಹೇಳಿದರು. ವಾಲ್ಮೀಕಿಗಳು ರೂಪಿಸಿದ ಶ್ರೀರಾಮ ನೀನು ನಮ್ಮ ಎದೆಯಲ್ಲಿ ಶಾಶ್ವತವಾಗಿ ನಿಂತೆ. ವರ್ಷಗಳ ಕಾಯುವಿಕೆ ನಂತರ ಇಂದು ವಿರಾಜಮಾನನಾದೆ ಗುಡಿಯೊಳಗೆ. ನಿನ್ನ ಕಣ್ತುಂಬಿಕೊಳ್ಳಲು ಎರಡೇ ಕಣ್ಣನೇಕೆ ಕೊಟ್ಟೆ, ನಿನ್ನ ಕೀರ್ತನೆಗೆ ಎರಡೇ ಕಿವಿಗಳು…’ ಎಂದು ಸುದೀಪ್ ಬರೆದುಕೊಂಡಿದ್ದಾರೆ.

‘ನಮ್ಮದು ಎಂತಹ ಪುಣ್ಯ. ಕರುನಾಡಿನಿಂದ ವಿಗ್ರಹವಾಗಿ ರೂಪುಗೊಂಡೆ. ಕರ್ನಾಟಕದ ಮಣ್ಣಿನ ಗರ್ಭದಿಂದ ಎದ್ದು ಬಂದೆ. ನಿನ್ನ ಆಲಯ ಕಟ್ಟಲು ಶ್ರೀ ವಿಶ್ವ ಪ್ರಸನ್ನ ತೀರ್ಥ ಗುರುಗಳಿಗೆ ಅದೃಷ್ಟ ಕೊಟ್ಟೆ. ಅರುಣ್‌ ಯೋಗರಾಜ್‌ ಅವರಿಗೆ ನಿನ್ನ ಕೆತ್ತಲು ಕಲಾಶೀರ್ವಾದವಾದೆ. ನಿನ್ನ ಪರಮ ಭಕ್ತ ಕನ್ನಡದ ಮಣ್ಣಿನ ವೀರ ಹನುಮಾನ. ಇದು ಕರ್ನಾಟಕಕ್ಕೆ ನಿಜವಾದ ಸಮ್ಮಾನ. ಜೈಶ್ರೀರಾಮ್‌’ ಎಂದು ಕಿಚ್ಚ ಬರೆದುಕೊಂಡಿದ್ದಾರೆ.

Related Articles

Latest Articles