Tuesday, July 23, 2024

ಕಾಸರಗೋಡು: ಬೈಕ್- ಟ್ಯಾಂಕರ್ ಲಾರಿ ಢಿಕ್ಕಿ; ವಿದ್ಯಾರ್ಥಿಗೆ ಗಂಭೀರ ಗಾಯ

ಕುಂಬಳೆ: ಬೈಕ್‌ ಹಾಗೂ ರಾಷ್ಟ್ರೀಯ ಹೆದ್ದಾರಿ ಕಾಮಗಾರಿಗೆ ನೀರು ಸಾಗಿಸುವ ಟ್ಯಾಂಕರ್ ಲಾರಿ ಢಿಕ್ಕಿ ಹೊಡೆದು ವಿದ್ಯಾರ್ಥಿ ಗಂಭೀರ ಗಾಯಗೊಂಡ ಘಟನೆ ನಡೆದಿದೆ. ನಯಬಜಾರ್ ಬಳಿಯ ಕುಕ್ಕಾರ್‌ನಲ್ಲಿ ಇಂದು ಬೆಳಿಗ್ಗೆ ಘಟನೆ ಸಂಭವಿಸಿದೆ.

ಮಂಗಳೂರಿನಲ್ಲಿ ವಿದ್ಯಾರ್ಥಿಯಾಗಿರುವ ಬಂಬ್ರಾಣ ಅಂಡಿತ್ತಡ್ಕ ನಿವಾಸಿ ಯೂಸಫ್ ಕೈಫ್ (೧೯) ಗಾಯಗೊಂಡವರು. ಅವರನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಇಂದು ಬೆಳಿಗ್ಗೆ ೭.೪೫ರ ವೇಳೆ ಕುಕ್ಕಾರ್ ಶಾಲೆ ಬಳಿಯ ಸರ್ವಿಸ್ ರಸ್ತೆಯಲ್ಲಿ ಯೂಸಫ್ ಕೈಫ್ ಸಂಚರಿಸುತ್ತಿದ್ದ ಬೈಕ್‌ ಹಾಗೂ ಟ್ಯಾಂಕರ್ ಲಾರಿ ಢಿಕ್ಕಿ ಹೊಡೆದು ಅಪಘಾತ ಸಂಭವಿಸಿದೆ.

ಯೂಸಫ್ ಕೈಫ್ ಮಂಗಳೂರಿನ ಕಾಲೇಜಿನ ಬಿ.ಕಾಂ ವಿದ್ಯಾರ್ಥಿಯಾಗಿದ್ದಾರೆ. ಇಂದು ಬೆಳಿಗ್ಗೆ ಅವರು ಕಾಲೇಜಿಗೆಂದು ತೆರಳುತ್ತಿದ್ದಾಗ ಅಪಘಾತವುಂಟಾಗಿದೆ.

Related Articles

Latest Articles