ಚಿತ್ರದುರ್ಗ: ಕುರುಬ ಸಮುದಾಯದ ಬಾಲಕನನ್ನು ಇಸ್ಲಾಂ ಧರ್ಮಕ್ಕೆ ಮತಾಂತರ ಮಾಡಿದ ಆರೋಪ ಕೇಳಿಬಂದಿದೆ. ಚಳ್ಳಕೆರೆ ತಾಲೂಕಿನ ಪರಶುರಾಂಪುರ ಗ್ರಾಮದಲ್ಲಿ ಈ ಘಟನೆ ನಡೆದಿದ್ದಾಗಿ ನವಸಮಾಜ.ಕಾಮ್ ವರದಿ ಭಿತ್ತರಿಸಿದೆ.
ಶಾಲೆಗೆ ಹೋಗುತ್ತಿದ್ದ ಬಾಲಕನನ್ನು ಮುಸ್ಲಿಂ ಯುವಕರು ಮತಾಂತರ ಮಾಡಿದ್ದಾಗಿ ಆರೋಪ ಕೇಳಿಬಂದಿದೆ.
ಈ ಸಂಬಂಧ ಬಾಲಕನ ಪೋಷಕರು ಠಾಣೆಗೆ ದೂರು ನೀಡಿದರೂ ಪೊಲೀಸರು ಯಾವುದೇ ಕ್ರಮ ಕೈಗೊಳ್ಳದೆ ನಿರ್ಲಕ್ಷ್ಯ ತೋರಿದ್ದಾರೆ ಎಂದು ಹಿಂದೂ ಜಾಗರಣ ವೇದಿಕೆ ಆರೋಪಿಸಿದೆ.
ಈ ಕುರಿತು ಹಿಂದೂ ಜಾಗರಣ ವೇದಿಕೆಯ ಮಂಜುನಾಥ್ ಆಕ್ರೋಶ ವ್ಯಕ್ತಪಡಿಸಿದ್ದು, ಮತಾಂತರಗೊಂಡ ಬಾಲಕನ ಪೋಷಕರು ಅಕ್ಟೋಬರ್ 29 ರಂದು ಪರಶುರಾಂಪುರ ಠಾಣೆಗೆ ದೂರು ನೀಡಿದ್ದಾರೆ. ಆದರೆ, ಪೊಲೀಸರು ಮತಾಂತರ ಮಾಡಿದವರ ವಿರುದ್ಧ ಯಾವುದೇ ಕ್ರಮ ಕೈಗೊಳ್ಳದೆ ನಿರ್ಲಕ್ಷ್ಯ ತೋರಿದ್ದಾರೆ ಎಂದು ಗಂಭೀರ ಆರೋಪಿಸಿದ್ದಾರೆ.