ಬಂಟ್ವಾಳ : ವ್ಯಕ್ತಿಯನ್ನು ಮಾತುಕತೆ ನಡೆಸುವ ಕಾರಣವೊಡ್ಡಿ ಕಾರಿನಲ್ಲಿ ಕರೆದುಕೊಂಡು ಹೋಗಿ ಹಲ್ಲೆ ನಡೆಸಿದ ಬಗ್ಗೆ ಬಂಟ್ವಾಳ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬಂಟ್ವಾಳ ಕಸಬಾ ಗ್ರಾಮದ ನಿವಾಸಿ ನೌಷಾದ್ (35) ಎಂಬವರರು ಹಲ್ಲೆಗೊಳಗಾದ ವ್ಯಕ್ತಿ. ನೌಷದ್ ನೀಡಿದ ದೂರಿನನ್ವಯ ಬಂಟ್ವಾಳ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ನೌಶಾದ್ ಅವರು ನ 6 ರಂದು ತನ್ನ ಸ್ಕೂಟರಿನಲ್ಲಿ ಸಂಚರಿಸುತ್ತಿದ್ದ ವೇಳೆ ತುಂಬೆ ಜಂಕ್ಷನ್ ಬಳಿ ತಲುಪಿದಾಗ ಹಿಂದಿನಿಂದ ಬಂದ ಕಾರು ಸ್ಕೂಟರಿಗೆ ಅಡ್ಡ ನಿಲ್ಲಿಸಿ ಜುನೈದ್ ಹಾಗೂ ಇತರರು ಹಲ್ಲೆ ಮಾಡಿ, ಜೀವ ಬೆದರಿಕೆ ಹಾಕಿದ್ದಾರೆ ಎಂದು ನೌಶಾದ್ ಠಾಣೆಗೆ ನೀಡಿದ ದೂರಿನಲ್ಲಿ ತಿಳಿಸಿದ್ದಾರೆ.
ಬಂಟ್ವಾಳ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.