Monday, December 9, 2024

ದಕ್ಷಿಣ ಕನ್ನಡ: ಸಿಡಿಲು ಬಡಿದುನವವಿವಾಹಿತ ಮೃತ್ಯು

ದಕ್ಷಿಣ ಕನ್ನಡ: ಸಿಡಿಲು ಬಡಿದು ವ್ಯಕ್ತಿಯೋರ್ವರು ಮೃತಪಟ್ಟ ದಾರುಣ ಘಟನೆ ಕಡಬ ತಾಲೂಕಿನ ಸುಬ್ರಹ್ಮಣ್ಯದಲ್ಲಿ ಮೇ 3 ರ ಸಂಜೆ ಸಂಭವಿಸಿದೆ. ಸುಬ್ರಹ್ಮಣ್ಯ ಗ್ರಾಮದ ಪರ್ವತಮುಖಿ ನಿವಾಸಿ ಸೋಮಸುಂದರ್ (34) ಮೃತಪಟ್ಟವರು.

ಮಳೆ ಆರಂಭಕ್ಕೂ ಮೊದಲು ಗುಡುಗು ಸಹಿತ ಗಾಳಿ ಬೀಸುತ್ತಿತ್ತು. ಮನೆಯಂಗಲದಲ್ಲಿ ಒಣಗಿಸಲು ಹಾಕಲಾಗಿದ್ದ ಅಡಿಕೆಯನ್ನು ಸೋಮಸುಂದರ್ ಅವರು ರಾಶಿ ಮಾಡುವ ವೇಳೆ ಸಿಡಿಲು ಬಡಿದು ಅಸ್ವಸ್ಥಗೊಂಡಿದ್ದರು.

ಕೂಡಲೇ ಅವರನ್ನು ಕಡಬ ಸಮುದಾಯ ಆಸ್ಪತ್ರೆಗೆ ಕರೆದೊಯ್ದರೂ ಆ ವೇಳೆಗಾಗಲೇ ಅವರು ಮೃತಪಟ್ಟಿರುವುದಾಗಿ ಮಾಹಿತಿ ಲಾಭಿಸಿದೆ.

ಸುಬ್ರಹ್ಮಣ್ಯ ಸಮೀಪ ಕಾರ್ ವಾಷಿಂಗ್ ಉದ್ಯಮ ನಡೆಸಿಕೊಂಡಿದ್ದ ಇವರು 10 ದಿನಗಳ ಹಿಂದೆಯಷ್ಟೇ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದರು. ಮೃತರು ತಾಯಿ, ತಂಗಿ, ಪತ್ನಿಯನ್ನು ಅಗಲಿದ್ದಾರೆ.

Related Articles

Latest Articles