ಭಾರತ ಚುನಾವಣಾ ಆಯೋಗವು ಸಾರ್ವತ್ರಿಕ ಲೋಕಸಭೆ ಚುನಾವಣೆ ಘೋಷಣೆ ಮಾಡಿದ್ದು, ಏಳು ಹಂತಗಳಲ್ಲಿ ಮತದಾನ ನಡೆಯಲಿದೆ. ಅದ್ರಂತೆ, ಏಪ್ರಿಲ್ 19ರಿಂದ ಲೋಕಸಭೆ ಚುನಾವಣೆ ಆರಂಭವಾಗಿದೆ. ಇನ್ನು ಜೂನ್ 4ಕ್ಕೆ ಫಲಿತಾಂಶ ಪ್ರಕಟವಾಗಲಿದೆ.
ಕರ್ನಾಟಕದಲ್ಲಿ ಮೊದಲ ಹಂತದಲ್ಲಿ 14 ಕ್ಷೇತ್ರಗಳಿಗೆ ಹಾಗೂ ಎರಡನೇ ಹಂತದಲ್ಲಿ 14 ಕ್ಷೇತ್ರಗಳಿಗೆ ಮತದಾನ ನಡೆಯಲಿದೆ.
ಕರ್ನಾಟಕದಲ್ಲಿ ಏಪ್ರಿಲ್ 26ರಂದು ಹಾಗೂ ಮೇ 7ರಂದು ಮತದಾನ ನಡೆಯಲಿದೆ. ಜೂನ್ 4ರಂದು ಮತ ಎಣಿಕೆ, ಫಲಿತಾಂಶ ಪ್ರಕಟವಾಗಲಿದೆ. ದಕ್ಷಿಣ ಕರ್ನಾಟಕ ಎರಡನೇ ಹಂತದಲ್ಲಿ ಮತದಾನ ನಡೆದರೆ, ಉತ್ತರ ಕರ್ನಾಟಕ ಪ್ರದೇಶಗಳಲ್ಲಿ ಮೂರನೇ ಹಂತದಲ್ಲಿ ಮತದಾನ ನಡೆಯಲಿದೆ.
ಸಿ-ವಿಜಿಲ್‍ನಲ್ಲಿ ದೂರು ಕೊಡಿ:
ಚುನಾವಣಾ ಅಕ್ರಮ, ಎಂ.ಸಿ.ಸಿ. ಉಲ್ಲಂಘನೆ ಸೇರಿದಂತೆ ಚುನಾವಣೆಗೆ ಸಂಬಂಧಿಸಿದ ಏನೇ ದೂರುಗಳಿದಲ್ಲಿ ಸಿ-ವಿಜಿಲ್ ತಂತ್ರಾಂಶ ಮತ್ತು 1950 ಟೋಲ್ ಫ್ರೀ ಸಂಖ್ಯೆಗೆ ಕರೆ ಮಾಡಿ ದೂರು ಸಲ್ಲಿಸಬಹುದಾಗಿದೆ.
ವಿವಿಧ ತಂಡಗಳು ತಪಾಸಣೆ ಸಂದರ್ಭದಲ್ಲಿ ವಶಕ್ಕೆ ಪಡೆಯಲಾದ ಹಣ, ಇತರೆ ಬೆಲೆ ಬಾಳುವ ವಸ್ತುಗಳ ಪರಿಶೀಲನೆಗೆ ಜಿಲ್ಲಾ ಪಂಚಾಯತ್ ಸಿ.ಇ.ಓ ನೇತೃತ್ವದಲ್ಲಿ ಕ್ಯಾಶ್ ರಿಡ್ರೆಸಲ್ ಸಮಿತಿ ರಚಿಸಲಾಗಿದೆ.