Monday, September 16, 2024

ದಕ್ಷಿಣ ಕನ್ನಡ: ಲಂಚ ಸ್ವೀಕರಿಸುತ್ತಿದ್ದಾಗ ಲೋಕಾಯುಕ್ತ ಬಲೆಗೆ ಬಿದ್ದ ಮಹಿಳಾ ಅಧಿಕಾರಿ

ಮಂಗಳೂರು: ಕೃಷಿ ಇಲಾಖೆಯ ಮಹಿಳಾ ಅಧಿಕಾರಿಯೊಬ್ಬರು ಲೋಕಾಯುಕ್ತ ಪೊಲೀಸರ ಕೈಗೆ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದಿದ್ದಾರೆ.

ಮಂಗಳೂರಿನ ಉಪ ಕೃಷಿ ನಿರ್ದೇಶಕಿ ಭಾರತಮ್ಮ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದ ಅಧಿಕಾರಿ. ನಿವೃತ್ತ ಅರಣ್ಯಾಧಿಕಾರಿ ಪರಮೇಶ್ ಅವರು ನೀಡಿದ ದೂರಿನ ಮೇರೆಗೆ ಕಾರ್ಯಾಚರಣೆ ನಡೆಸಿರುವುದಾಗಿ ಪೊಲೀಸರು ತಿಳಿಸಿದ್ದಾರೆ.

ದೂರುದಾರರ ಪ್ರಕಾರ, ಭಾರತಮ್ಮ ಅವರು “ಪ್ರಧಾನ ಮಂತ್ರಿ ಕೃಷಿ ಸಿಂಚಾಯಿ ಯೋಜನೆ ಡಬ್ಲ್ಯುಸಿಡಿ 2.0” ಗೆ ಸಂಬಂಧಿಸಿದ ಬಿಲ್‌ಗಳಿಗೆ 50 ಲಕ್ಷ ರೂ. ಬಾಕಿ ಬಿಡುಗಡೆ ಮಾಡಲು 15 % ಲಂಚಕ್ಕೆ ಬೇಡಿಕೆ ಇಟ್ಟಿದ್ದರು.

1 ಲಕ್ಷ ರೂ.ಲಂಚ ಸ್ವೀಕರಿಸುತ್ತಿದ್ದಾಗಲೇ ಭಾರತಮ್ಮ ಸಿಕ್ಕಿಬಿದ್ದಿದ್ದು, ನ್ಯಾಯಾಲಯಕ್ಕೆ ಹಾಜರುಪಡಿಸಲಾಗುವುದು ಎಂದು ಲೋಕಾಯುಕ್ತ ಪೊಲೀಸರು ತಿಳಿಸಿದ್ದಾರೆ.

Related Articles

Latest Articles