8 ವರ್ಷದ ಬಾಲಕನೊಬ್ಬನಿಗೆ `ವಡಾ ಪಾವ್ ಕೊಡಿಸಿ, ಆಮಿಷ ಒಡ್ಡಿ ವ್ಯಕ್ತಿಯೊಬ್ಬ ಲೈಂಗಿಕ ಕಿರುಕುಳ ನೀಡಿ ಹತ್ಯೆಗೈದ ಘಟನೆ ವರದಿಯಾಗಿದೆ. ಪುಣೆಯ ಪಿಂಪ್ರಿ ಚಿಂಚ್‌ವಾಡ್ ಪ್ರದೇಶದಲ್ಲಿ ಘಟನೆ ನಡೆದಿದೆ.
ಶನಿವಾರದಂದು ಬಾಲಕ ತನ್ನ ಮನೆಯ ಸಮೀಪದಿಂದ ನಾಪತ್ತೆಯಾಗಿದ್ದಾನೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಸಿಸಿಟಿವಿ ಫೂಟೇಜ್‌ನಲ್ಲಿ ಬಾಲಕನನ್ನು 28 ವರ್ಷದ ಪವನ್ ಪಾಂಡೆ ಎಂಬ ವ್ಯಕ್ತಿ ಅಪಹರಿಸಿರುವುದು ತಿಳಿದುಬಂದಿದೆ ಎಂದು ಪಿಟಿಐ ವರದಿ ಮಾಡಿದೆ.
ತನಿಖೆ ಚುರುಕುಗೊಳಿಸಿದ ವಕಾಡ್ ಪೊಲೀಸರು ಶಂಕಿತ ಆರೋಪಿ ಪವನ್ ಪಾಂಡೆಯನ್ನು ಭಾನುವಾರ ಬಂಧಿಸಿದ್ದಾರೆ. ಬಾಲಕನನ್ನು ಕತ್ತು ಹಿಸುಕಿ ಕೊಲೆ ಮಾಡುವ ಮೊದಲ ಆತ ಲೈಂಗಿಕ ದೌರ್ಜನ್ಯ ಎಸಗಿದ್ದಾಗಿ ಒಪ್ಪಿಕೊಂಡಿದ್ದಾನೆ” ಎಂದು ಅಧಿಕಾರಿ ತಿಳಿಸಿದ್ದಾರೆ.
ಪವನ್ ಪಾಂಡೆ ವಿರುದ್ಧ ಭಾರತೀಯ ದಂಡ ಸಂಹಿತೆ ಮತ್ತು ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ (ಪೋಕ್ಸೊ) ಕಾಯ್ದೆಯ ನಿಬಂಧನೆಗಳ ಅಡಿಯಲ್ಲಿ ಕೊಲೆ, ಅಸ್ವಾಭಾವಿಕ ಲೈಂಗಿಕತೆ ಮತ್ತು ಇತರ ಅಪರಾಧಗಳ ಆರೋಪ ಹೊರಿಸಲಾಗಿದೆ ಎಂದು ಅಧಿಕಾರಿ ಮಾಧ್ಯಮಕ್ಕೆ ತಿಳಿಸಿದ್ದಾರೆ.