ಮಂಗಳೂರು: ಬಸ್ ಮತ್ತು ಬೈಕ್ ನಡುವೆ ನಡೆದ ಅಪಘಾತದಲ್ಲಿ ವಿದ್ಯಾರ್ಥಿಯೋರ್ವ ಮೃತಪಟ್ಟ ಘಟನೆ ಮಾ. 1ರ ರಾತ್ರಿ ಮಂಗಳೂರಿನ ಕಂಕನಾಡಿ ಸಮೀಪ ನಡೆದಿದೆ.
ಕಕ್ಕಿಂಜೆ ಸಮೀಪದ ಚಾರ್ಮಾಡಿ ಜಲಾಲಿಯಾ ನಗರದ ನಿವಾಸಿ, ವಹೀದಾ ಅವರ ಪುತ್ರ ಮಂಗಳೂರಿನ ಯೇನಪೊಯ ಕಾಲೇಜಿನ ವಿಧ್ಯಾರ್ಥಿ ಸಿನಾನ್ (21) ಮೃತರು.
ಬಡಕುಟುಂಬದ ಸಿನಾನ್ ಪಾರ್ಟ್ ಟೈಮ್ ಆಗಿ ಫುಡ್ ಡೆಲಿವರಿ ಕೆಲಸ ಮಾಡುತ್ತಿದ್ದರು. ತನ್ನ ಕುಟುಂಬಕ್ಕೆ ಆಧಾರಸ್ತಂಭವಾಗಿದ್ದ ಅವರು, ವಿದ್ಯಾಭ್ಯಾಸವನ್ನು ತನ್ನ ಖರ್ಚಿನಿಂದಲೇ ನಿಭಾಯಿಸುತ್ತಿದ್ದರು. ಇದೇ ರೀತಿ ಶುಕ್ರವಾರ ರಾತ್ರಿ ವೇಳೆ ಫುಡ್ ಡೆಲಿವರಿ ಮಾಡುತ್ತಿದ್ದಾಗ ವಾಹನ ಅಪಘಾತ ಸಂಭವಿಸಿದೆ ಎಂದು ಹೇಳಲಾಗಿದೆ.
ಬೈಕನ್ನು ಓವರ್ ಟೇಕ್ ಮಾಡುವ ಭರದಲ್ಲಿ ಬಸ್ ಬೈಕಿನ ಹ್ಯಾಂಡಲ್‌ಗೆ ತಾಗಿದೆ. ಪರಿಣಾಮ ಬೈಕ್ ಸವಾರ ಬಸ್ಸಿನಡಿಗೆ ಬಿದ್ದು, ದಾರುಣವಾಗಿ ಮೃತಪಟ್ಟಿದ್ದಾರೆ.
ಮೃತರು ತಂದೆ, ತಾಯಿ, ಸಹೋದರ ಹಾಗೂ ಸಹೋದರಿಯನ್ನು ಅಗಲಿದ್ದಾರೆ.