ಮಂಗಳೂರಿನ ಕೆಎಸ್ ಆರ್ ಟಿಸಿ ಬಸ್ ನಿಲ್ದಾಣದ ಬಳಿಯ ಮಸಾಜ್ ಪಾರ್ಲರ್ ಮೇಲೆ ಗುರುವಾರ ನಡೆದ ದಾಳಿಗೆ ಸಂಬಂಧಿಸಿದಂತೆ ರಾಮ ಸೇನೆ ಸಂಸ್ಥಾಪಕ ಪ್ರಸಾದ್ ಅತ್ತಾವರ ಸೇರಿದಂತೆ 14 ಮಂದಿಯನ್ನು ಬಂಧಿಸಲಾಗಿದೆ.
ವೇಶ್ಯಾವಾಟಿಕೆ ದಂಧೆ ನಡೆಸಲಾಗುತ್ತಿದೆ ಎಂದು ಆರೋಪಿಸಿ ಜ. 23ರ ಮಧ್ಯಾಹ್ನ ಬಿಜೈ ಕೆಎಸ್ ಆರ್ ಟಿಸಿ ಬಸ್ ನಿಲ್ದಾಣದ ಬಳಿಯಿರುವ ಕಲರ್ಸ್ ಯೂನಿಸೆಕ್ಸ್ ಸೆಲೂನ್ ಮೇಲೆ ರಾಮ ಸೇನೆ ಸಂಸ್ಥಾಪಕ ಪ್ರಸಾದ್ ಅತ್ತಾವರ ನೇತೃತ್ವದಲ್ಲಿ ಕಾರ್ಯಕರ್ತರು ದಾಳಿ ನಡೆಸಿದ್ದರು.
ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲಿಸಿಸಿದ್ದು, ಬಳಿಕ ರಾಮಸೇನೆ ಸಂಘಟನೆ ಸಂಸ್ಥಾಪಕ ಪ್ರಸಾದ್ ಅತ್ತಾವರ ಹಾಗೂ 13 ಕಾರ್ಯಕರ್ತರನ್ನು ಬಂಧಿಸಿದ್ದಾರೆ.
ಹರ್ಷ ರಾಜ್, ಮೋಹನ್ ದಾಸ್, ಪುರಂದರ, ಸಚಿನ್, ರವೀಶ್, ಸುಕೇಶ, ಅಂಕಿತ್, ಕಾಳಿ ಮುತ್ತು, ಅಭಿಲಾಷ್, ದೀಪಕ್ ವಿಘ್ನೇಶ್, ಶರಣ್ ರಾಜ್, ಪ್ರದೀಪ್ ಪೂಜಾರಿ, ಪ್ರಸಾದ್ ಅತ್ತಾವರ ಬಂಧಿತ ಆರೋಪಿಗಳು.
ಮಸಾಜ್ ಪಾರ್ಲರ್ ಮೇಲೆ ದಾಳಿ ಪ್ರಕರಣಕ್ಕೆ ಸಂಬಂಧಿಸಿದಂತೆ ಬರ್ಕೆ ಪೊಲೀಸ್ ಠಾಣೆಯಲ್ಲಿ ಎಫ್.ಐ.ಆರ್ ದಾಖಲಾಗಿದೆ.
BNS ಕಾಯ್ದೆ 329(2), 324(5), 74, 351(3), 115(2), 109, 352, 190 ಅಡಿ ಪ್ರಕರಣ ದಾಖಲಾಗಿದ್ದು, ಒಟ್ಟು 14 ಅರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.